ಸಾಮೂಹಿಕ ಸತ್ಯನಾರಾಯಣ ಪೂಜೆ

ಚಳ್ಳಕೆರೆ: ನಗರದ ಸಾಯಿ ಮಂದಿರದಲ್ಲಿ ಮಂಗಳವಾರ ಗುರುಪೂರ್ಣಿಮೆ ಅಂಗವಾಗಿ ವೆಂಕಟಸಾಯಿ ಸೇವಾ ಟ್ರಸ್ಟ್ ವತಿಯಿಂದ ವಿಶೇಷ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತಿತರ ಧಾರ್ಮಿಕ ಕಾರ್ಯಗಳು ನೆರವೇರಿದವು.

ದೇಗುಲದಲ್ಲಿ ಬಾಬಾರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಕಾಕಡಾರತಿ, ವಿಷ್ಣು ಸಹಸ್ರನಾಮ ಪಾರಾಯಣ, ಆಧ್ಯಾತ್ಮಿಕ ಭಜನಾ ಕಾರ್ಯಕ್ರಮಗಳು ಜರುಗಿದವು. ಬಳಿಕ ನಗರದ ಪ್ರಮುಖ ಬೀದಿಗಳಲ್ಲಿ ಸಾಯಿಬಾಬಾರ ಭಾವಚಿತ್ರ ಮೂರ್ತಿ ಮೆರವಣಿಗೆ ನಡೆಯಿತು.

ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ನೂರಾರು ದಂಪತಿಗಳು ವ್ರತಾಚರಣೆಯೊಂದಿಗೆ ಪಾಲ್ಗೊಂಡು ಭಕ್ತಿ ಮೆರೆದರು. ಟ್ರಸ್ಟ್ ಅಧ್ಯಕ್ಷ ಸಂಜೀವಮೂರ್ತಿ, ಸಮಿತಿ ಪದಾಧಿಕಾರಿಗಳು, ಸಾವಿರಾರು ಭಕ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *