ಚಳ್ಳಕೆರೆ: ಪ್ರಜಾಪ್ರಭುತ್ವ ವ್ಯವಸ್ಥೆ ಕಾಪಾಡುವಲ್ಲಿ ಮತದಾರರಲ್ಲಿ ಜಾಗೃತಿ ಅಗತ್ಯವಿದೆ ಎಂದು ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ದೇವೇಂದ್ರ ಪಂಡಿತ್ ಹೇಳಿದರು.
ತಾಲೂಕು ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಮಾತನಾಡಿ, ಯುವ ಸಮುದಾಯ ದೇಶದ ಜವಾಬ್ದಾರಿ ತಿಳಿದುಕೊಳ್ಳುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು ಎಂದರು.
ತಹಸೀಲ್ದಾರ್ ಎಂ.ಮಲ್ಲಿಕಾರ್ಜುನ, ಪ್ರಧಾನ ಸಿವಿಲ್ ನ್ಯಾಯಾಧೀಶ ಕೋಟೆಪ್ಪ ಕಾಂಬ್ಳೆ, ಅಪರ ಸಿವಿಲ್ ನ್ಯಾಯಾಧೀಶ ಮನು ಪಾಟೀಲ್, ವಕೀಲರ ಸಂಘದ ಅಧ್ಯಕ್ಷ ಕೆ.ಎಂ.ನಾಗರಾಜ, ವಕೀಲ ಕುರುಡಿಹಳ್ಳಿ ಶ್ರೀನಿವಾಸ, ಬಿಇಒ ಸಿ.ಎಸ್.ವೆಂಕಟೇಶ್, ಉಪನ್ಯಾಸಕಿ ಕವಿತಾ, ಪೌರಾಯುಕ್ತ ಪಾಲಯ್ಯ, ಪ್ರೊ.ಎಂ.ಶಿವಲಿಂಗಪ್ಪ ಮತ್ತಿತರರಿದ್ದರು.