More

  ಭಾರತ್ ಬಂದ್‌ಗೆ ಬೆಂಬಲ

  ಚಳ್ಳಕೆರೆ: ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಮತ್ತು ಕಾರ್ಮಿಕ ಸಂಘಟನೆಗಳು ಜ.8ರಂದು ಕರೆ ನೀಡಿರುವ ದೇಶವ್ಯಾಪಿ ಮುಷ್ಕರ ಬೆಂಬಲಿಸುವುದಾಗಿ ರೈತಸಂಘ ರಾಜ್ಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ತಿಳಿಸಿದ್ದಾರೆ.

  ದಿನನಿತ್ಯದ ವಸ್ತುಗಳ ಮೇಲಿನ ಬೆಲೆ ಏರಿಕೆ ನಿಯಂತ್ರಣ ಮಾಡುವುದಾಗಿ ಹೇಳಿದ್ದ ಬಿಜೆಪಿ ಅಧಿಕಾರ ಸಿಕ್ಕಿದ ಕೂಡಲೇ ಜನಸಾಮಾನ್ಯರ ವಿರೋಧಿ ಕಾನೂನು ಜಾರಿ ಮಾಡಲು ಮುಂದಾಗಿದೆ. ರೈತರ ಬೇಡಿಕೆಗಳಿಗೆ ಯಾವುದೇ ಯೋಜನೆಗಳು ಜಾರಿ ಮಾಡಿಲ್ಲ. ಡಾ. ಸ್ವಾಮಿನಾಥನ್ ವರದಿ ಜಾರಿಗೊಳಿಸಿ ಕನಿಷ್ಠ ಬೆಂಬಲ ಬೆಲೆ ನೀಡದೇ ರೈತರನ್ನು ಸಾಲಗಾರರನ್ನಾಗಿ ಮಾಡಲಾಗಿದೆ. ಆದ್ದರಿಂದ ತಾಲೂಕಿನಲ್ಲಿ ಬಂದ್ ಯಶಸ್ವಿಗೆ ಕಾರ್ಯತಂತ್ರ ರೂಪಿಸುವುದಾಗಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

  ಸತತ 8 ವರ್ಷಗಳಿಂದ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಆದರೆ, ಬರ ಕಾಮಗಾರಿಗಳನ್ನು ಪ್ರಾರಂಭ ಮಾಡಿಲ್ಲ. ಒಂದು ಎಕರೆ ಭೂಮಿಯನ್ನು ನೀರಾವರಿ ಮಾಡಲಾಗಿಲ್ಲ.ಜನ ವಿರೋಧಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದರು.

  ಮುಖಂಡರಾದ ರೆಡ್ಡಿಹಳ್ಳಿ ವೀರಣ್ಣ, ಎಐಟಿಯುಸಿ ಸಂಘಟನೆಯ ಸಿ.ವೈ. ಶಿವರುದ್ರಪ್ಪ, ದೊಡ್ಡ ಉಳ್ಳಾರ್ತಿ ಕರಿಯಣ್ಣ, ಟಿ. ತಿಪ್ಪೇಸ್ವಾಮಿ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts