More

    ತಾಲೂಕಿನ ಅಭಿವೃದ್ಧಿಗೆ ಆದ್ಯತೆ

    ಚಳ್ಳಕೆರೆ: ರಾಜ್ಯಗಳ ಒಕ್ಕೂಟ ವ್ಯವಸ್ಥೆಯಲ್ಲಿ ಸಮಾನತೆ, ಭ್ರಾತೃತ್ವ ಮತ್ತು ಏಕತೆ ಕಾಪಾಡಿಕೊಳ್ಳುವಲ್ಲಿ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

    ನಗರದ ಬಿಎಂಜಿಎಚ್‌ಎಸ್ ಶಾಲೆ ಆವರಣದಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ತಾಲೂಕಿನ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿ ಉದ್ದೇಶದಿಂದ ಇಂಜಿನಿಯರಿಂಗ್ ಕಾಲೇಜು, ಜಿಟಿಡಿಸಿ ತರಬೇತಿ ಕೇಂದ್ರ, ಪರಶುರಾಮಪುರ ಹೋಬಳಿ ಭಾಗದಲ್ಲಿ ಐಟಿಐ ಕಾಲೇಜು ಆರಂಭಕ್ಕೆ ಆದ್ಯತೆ ನೀಡಲಾಗಿದೆ. 2,380 ಕೋಟಿ ರೂ. ವೆಚ್ಚದ ತುಂಗಭದ್ರ ಹಿನ್ನೀರು ಯೋಜನೆ ತ್ವರಿತಗತಿಯಲ್ಲಿ ನಡೆಯುತ್ತಿದೆ. ನಿರೀಕ್ಷೆಯಂತೆ ಭದ್ರಾ ಮೇಲ್ದಂಡೆ ಕಾಮಗಾರಿ ಚುರುಕುಗೊಂಡಿದೆ. ಇಷ್ಟೆಲ್ಲ ಅಭಿವೃದ್ಧಿ ಕೆಲಸ ಮಾಡಲು ಜನತೆ ಕೊಟ್ಟ ಅಧಿಕಾರದಿಂದ ಸಾಧ್ಯವಾಗಿದೆ ಎಂದರು.

    ತಹಸೀಲ್ದಾರ್ ಎಂ.ಮಲ್ಲಿಕಾರ್ಜುನ ಮಾತನಾಡಿದರು. ತಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ, ಉಪಾಧ್ಯಕ್ಷೆ ತಿಪ್ಪಮ್ಮ ಲಿಂಗಾರೆಡ್ಡಿ, ಸದಸ್ಯೆ ಉಮಾ , ಎಚ್.ಸಮರ್ಥ್ ರಾಯ್, ಜಿಪಂ ಸದಸ್ಯ ಬಿ.ಪಿ.ಪ್ರಕಾಶಮೂರ್ತಿ, ನಗರಸಭಾ ಸದಸ್ಯರಾದ ಸಿ.ಶ್ರೀನಿವಾಸ್, ಸುಮಾ, ಆರ್.ಮಂಜುಳಾ, ರಾಘವೇಂದ್ರ, ರಮೇಶ್‌ಗೌಡ, ಕೆ.ವೀರಭದ್ರಯ್ಯ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts