More

    ಬಡ ಮಕ್ಕಳಿಗೆ ಉತ್ತಮ ಶಿಕ್ಷಣ

    ಚಳ್ಳಕೆರೆ: ಸರ್ಕಾರಿ ಶಾಲೆಗಳಲ್ಲಿ ಬಡಮಕ್ಕಳಿಗೆ ಸಿಗುತ್ತಿರುವ ಗುಣಮಟ್ಟದ ಶಿಕ್ಷಣ ಮತ್ತು ಸೌಲಭ್ಯಗಳ ಬಗ್ಗೆ ಸಮಾಜಕ್ಕೆ ತಿಳಿಸುವುದು ಅಗತ್ಯವಿದೆ ಎಂದು ಬಿಇಒ ಸಿ.ಎಸ್.ವೆಂಕಟೇಶ್ ಹೇಳಿದರು.

    ತಾಲೂಕಿನ ಗಿರಿಯಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಗುರುತಿನ ಕಾರ್ಡ್ ವಿತರಿಸಿ ಮಾತನಾಡಿದರು.

    ಸರ್ಕಾರಿ ಶಾಲೆಯಲ್ಲಿ ಕಲಿತ ಮಕ್ಕಳೇ ಸ್ಪರ್ಧಾ ಪರೀಕ್ಷೆಗಳಲ್ಲಿ ಹೆಚ್ಚು ಯಶಸ್ವಿಯಗುತ್ತಿದ್ದಾರೆ. ಬಡ ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ಶಾಲೆ ಆಧಾರವಾಗಿವೆ ಎಂದು ಹೇಳಿದರು.

    ಶಿಕ್ಷಕರು, ಪಾಲಕರ ಸಹಭಾಗಿತ್ವದಲ್ಲಿ ಮಕ್ಕಳಿಗೆ ವಿಶೇಷ ಸಮವಸ್ತ್ರ ಮತ್ತು ಟೈ, ಬೆಲ್ಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಮಕ್ಕಳ ಮನೋವಿಕಾಸದಲ್ಲಿ ಪ್ರಗತಿ ಕಾಣಲು ಸಾಧ್ಯ ಎಂದರು.

    ಎಸ್‌ಡಿಎಂಸಿ ಅಧ್ಯಕ್ಷ ಜಿ.ತಿಮ್ಮಪ್ಪ, ಸಿಆರ್‌ಪಿ ಟಿ.ವಿ.ತಿಪ್ಪೇಸ್ವಾಮಿ, ಎಸ್.ವಿಷ್ಣುವರ್ಧನ್, ಮುಖ್ಯಶಿಕ್ಷಕಿ ಗೌರಮ್ಮ, ಸಹ ಶಿಕ್ಷಕರಾದ ಜಿ.ನಾಗರಾಜ, ಎಂ.ಬಿ.ವೆಂಕಟೇಶ್, ವಿ. ತಿಪ್ಪಮ್ಮ, ಡಿ.ಎಸ್.ಏಕಣ್ಣ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts