ಚಳ್ಳಕೆರೆ: ಶೈಕ್ಷಣಿಕ ಪ್ರಗತಿಯಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಟಿ.ರಘುಮೂರ್ತಿ ಅಭಿಪ್ರಾಯಪಟ್ಟರು.
ವಸಿಷ್ಠ ಶೈಕ್ಷಣಿಕ ಅಭಿವೃದ್ಧಿ ಅಕಾಡೆಮಿ ವೇದಶಾಲೆ ಮತ್ತು ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ತಾಲೂಕಿನ ಸಾಣೀಕೆರೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣದಿಂದ ಬದುಕಿನ ಬದಲಾವಣೆ ಸಾಧ್ಯ. ಶಿಕ್ಷಣ ಕೇವಲ ಉದ್ಯೋಗಕ್ಕೆ ಸೀಮಿತವಾಗದೆ ಮಾನವೀಯ ಮೌಲ್ಯ ಕಲಿಸುವ ಭಾಗವಾಗಬೇಕಿದೆ ಎಂದರು.
ಹಾಸ್ಯ ಕಲಾವಿದ ಪ್ರೊ.ಕೃಷ್ಣೇಗೌಡ ಮಾತನಾಡಿ, ಕನ್ನಡದ ಮೊದಲ ಪ್ರಾಧ್ಯಾಪಕ ತಳುಕಿನ ವೆಂಕಣ್ಣಯ್ಯ ಜನಿಸಿರುವ ನೆಲೆಯಿದು. ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ಕೊಟ್ಟ ಸಾಧಕರನ್ನು ಬೆಳೆಸಿರುವ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಂಥವರ ಬದುಕು ಆದರ್ಶವಾಗಬೇಕು ಎಂದು ತಿಳಿಸಿದರು.
ತಹಸೀಲ್ದಾರ್ ಎಂ.ಮಲ್ಲಿಕಾರ್ಜುನ, ಪ್ರೊ.ವೀರಣ್ಣ, ವೃತ್ತ ನಿರೀಕ್ಷಕ ಈ.ಆನಂದ್, ಜಿಪಂ ಸದಸ್ಯ ಬಿ.ಪಿ.ಪ್ರಕಾಶಮೂರ್ತಿ, ತಾಪಂ ಸಾಮಾಜಿಕ ಸಮಿತಿ ಅಧ್ಯಕ್ಷ ಎಚ್.ಆಂಜನೇಯ, ಸದಸ್ಯ ಜಿ.ವೀರೇಶ್, ನಗರಸಭೆ ಸದಸ್ಯರಾದ ವೈ.ಪ್ರಕಾಶ್, ಬಿ.ಟಿ.ರಮೇಶ್‌ಗೌಡ, ಎಂ.ಜೆ.ರಾಘವೇಂದ್ರ, ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಿ.ಟಿ.ರವೀಂದ್ರ ಮತ್ತಿತರರಿದ್ದರು.