More

    ಮಹಿಳಾ, ಮಕ್ಕಳ ಆಸ್ಪತ್ರೆ ಆರಂಭದಿಂದ ಅನುಕೂಲ

    ಚಳ್ಳಕೆರೆ: ನಗರದಲ್ಲಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಆರಂಭದಿಂದ ಬಡ ರೋಗಿಗಳಿಗೆ ಅನುಕೂಲವಾಗಲಿದೆ. ಮುಂದೆ ಆಸ್ಪತ್ರೆಯಲ್ಲಿ ಪ್ರತ್ಯೇಕ ಮಹಿಳಾ ವೈದ್ಯರು ಸೇರಿ ಅಗತ್ಯ ಸಿಬ್ಬಂದಿ ನೇಮಕಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

    ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಸಾರ್ವಜನಿಕ ಆಸ್ಪತ್ರೆಗೆ ಬಡರೋಗಿಗಳು ಹೆಚ್ಚಾಗಿ ಬರುತ್ತಾರೆ. 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಲ್ಲಿ ದಿನಕ್ಕೆ ಸುಮಾರು ಎರಡು ರೋಗಿಗಳು ತಪಾಸಣೆ ಮಾಡಿಸಿಕೊಳ್ಳುತ್ತಾರೆ. 200ಕ್ಕೂ ರೋಗಿಗಳ ದಾಖಲಾತಿ ಪ್ರಮಾಣ ಇದೆ. ಸದ್ಯ ನಬಾರ್ಡ್ ಯೋಜನೆಯಡಿ 7.5 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ ಎಂದರು.

    ಆಸ್ಪತ್ರೆಗೆ ಚಳ್ಳಕೆರೆ, ಮೊಳಕಾಲ್ಮೂರು, ಹಿರಿಯೂರು ತಾಲೂಕುಗಳಿಂದ ರೋಗಿಗಳು ಬರುತ್ತಾರೆ. ಇದರಿಂದ ಏಳು ವೈದ್ಯರು ಸೇರಿ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.

    ಸಚಿವ ಬಿ.ಶ್ರೀರಾಮುಲು ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನಿರ್ವಹಣೆಗೆ ಸ್ಥಳೀಯ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಎಂಬಿಬಿಎಸ್ ಪೂರೈಸಿದ ವೈದ್ಯರ ನೇಮಕಾತಿ ಮಾಡಿಕೊಳ್ಳಲು ಅಧಿಕಾರ ನೀಡಲಾಗಿದೆ ಎಂದು ಹೇಳಿದರು.

    ತಾಪಂ ಅಧ್ಯಕ್ಷೆ ವಿಜಯಲಕ್ಷ್ಮೀ, ಜಿಪಂ ಸದಸ್ಯರಾದ ಬಿ.ಪಿ. ಪ್ರಕಾಶಮೂರ್ತಿ, ಎನ್. ಓಬಳೇಶ್, ನಗರಸಭೆ ಸದಸ್ಯ ಎಸ್. ಜಯಣ್ಣ, ತಹಸೀಲ್ದಾರ್ ಎಂ.ಮಲ್ಲಿಕಾರ್ಜುನ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts