More

    ವೇತನ ಕೊಡಿಸಿ ಪುಣ್ಯ ಕಟ್ಟಿಕೊಳ್ಳಿ

    ಚಳ್ಳಕೆರೆ: ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ಜೀವನ ನಿರ್ವಹಣೆ ಕಷ್ಟವಾಗಿದೆ. ಆದ್ದರಿಂದ ವೇತನ ಕೊಡಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿ ಶಾಸಕ ಟಿ.ರಘುಮೂರ್ತಿ ಅವರಲ್ಲಿ ಮನವಿ ಮಾಡಿದರು.

    ಬುಧವಾರ ಮನವಿ ಸಲ್ಲಿಸಿದ ಶಿಕ್ಷಕರು, ಸಿಬ್ಬಂದಿ, ಸರ್ಕಾರದ ವತಿಯಿಂದ ವೇತನ ಕೊಡಿಸಲು ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದರು.

    ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಪದವೀಧರ ಶಿಕ್ಷಕರು ಖಾಸಗಿ ಶಾಲೆಗಳಲ್ಲಿ ದುಡಿಯುತ್ತಿದ್ದೇವೆ. ಕೋವಿಡ್-19 ಪರಿಣಾಮವಾಗಿ ಶಾಲಾ ವ್ಯವಸ್ಥೆಗಳು ಸ್ಥಗಿತವಾಗಿವೆ. ಇದರಿಂದ ವೃತ್ತಿ ಭದ್ರತೆ ಇಲ್ಲದೆ ಜೀವನ ನಿರ್ವಹಣೆ ಕಷ್ಟವಾಗಿದೆ. ಶಾಲೆಗಳು ಆರಂಭವಾಗುವ ತನಕ ಸರ್ಕಾರದಿಂದ ವೇತನ ಕೊಡಿಸಬೇಕು ಎಂದು ಒತತಾಯಿಸಿದರು.

    ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಕರೊನಾದಿಂದ ಪ್ರತಿ ವರ್ಗವೂ ಸಂಕಷ್ಟಕ್ಕೆ ಒಳಗಾಗಿದೆ. ಯಾವುದೇ ನಿಗದಿತ ವೇತನ ಮತ್ತು ಭದ್ರತೆ ಇಲ್ಲದ ಖಾಸಗಿ ಶಾಲೆಗಳಲ್ಲಿ ದುಡಿಯುವ ಶಿಕ್ಷಕರಿಗೆ ಈಗ ಬೇರೆ ವೃತ್ತಿ ನಿರ್ವಹಿಸಲು ಸಾಧ್ಯವಿಲ್ಲ. ಸಂಪೂರ್ಣ ಸಂಕಷ್ಟಕ್ಕೆ ಒಳಗಾಗಿರುವ ಶಿಕ್ಷಕರ ಸಮಸ್ಯೆಗಳ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚಿಸುವುದಾಗಿ ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts