More

    ಸಾಮಾಜಿಕ ಪಿಂಚಣಿ ಸಮಸ್ಯೆ ಸರಿಪಡಿಸಿ

    ಚಳ್ಳಕೆರೆ: ವಯೋವೃದ್ಧರು ವೃದ್ಧಾಪ್ಯ ವೇತನಕ್ಕೆ ಇಳಿ ವಯಸ್ಸಿನಲ್ಲಿ ಅಲೆದಾಡಿಸುವುದನ್ನು ತಪ್ಪಿಸಲು ಪ್ರತಿ ತಿಂಗಳು ನೇರವಾಗಿ ಅವರ ಖಾತೆಗೆ ಜಮೆ ಮಾಡುವಂತೆ ಶಾಸಕ ಟಿ.ರಘೂಮೂರ್ತಿ ಅಧಿಕಾರಿಗಳಿಗೆ ಸೂಚಿಸಿದರು.

    ತಾಲೂಕಿನ ನನ್ನಿವಾಳದಲ್ಲಿ ತಾಲೂಕು ಆಡಳಿತ ಬುಧವಾರ ಹಮ್ಮಿಕೊಂಡಿದ್ದ ಪಿಂಚಣಿ ಅದಾಲತ್ ಉದ್ಘಾಟಿಸಿ ಮಾತನಾಡಿ ವಿಳಂಬ ಮಾಡದಂತೆ ಪಿಂಚಣಿ ತಲುಪಿಸುವಂತೆ ತಾಕೀತು ಮಾಡಿದರು.

    ಗ್ರಾಮಗಳಿಗೆ ಭೇಟಿ ನೀಡಿದಾಗ, ಸಾಮಾಜಿಕ ಯೋಜನೆಗಳಡಿ ಐದಾರು ತಿಂಗಳಿಂದ ಪಿಂಚಣಿ ಕೊಟ್ಟಿಲ್ಲ ಎಂಬ ದೂರು ಬರುತ್ತಿವೆ. ಅಧಿಕಾರಿಗಳು ಸಬೂಬು ಹೇಳುವುದನ್ನು ಬಿಟ್ಟು ಕೆಲಸ ಮಾಡಬೇಕು ಎಂದರು.

    ತಹಸೀಲ್ದಾರ್ ಎಂ.ಮಲ್ಲಿಕಾರ್ಜುನ ಮಾತನಾಡಿ, ತಾಲೂಕಿನಲ್ಲಿ 7226 ಅಂಗವಿಕಲ 11,127 ವಿಧವಾ ವೇತನ ಹಾಗೂ ಸಂಧ್ಯಾ ಸುರಕ್ಷೆಯಡಿ 29684, ಮನಸ್ವಿನಿಯಡಿ 1102, ಓಎಪಿ ಅಡಿ 3807, ಮೈತ್ರಿ ಯೋಜನೆಯಡಿ 9 ಫಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಪಿಂಚಣಿ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಅಂಚೆ ಇಲಾಖೆ ಮತ್ತು ಬ್ಯಾಂಕ್ ಮೂಲಕ ಪಿಂಚಣಿ ತಲುಪುವಲ್ಲಿ ಆಗುತ್ತಿರುವ ವಿಳಂಬ ಮತ್ತು ನಿರ್ಲಕ್ಷದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts