More

    ಜನಸಂಖ್ಯೆ ಹೆಚ್ಚಳದಿಂದ ಸಾಮಾಜಿಕ ಸಮಸ್ಯೆ

    ಚಳ್ಳಕೆರೆ: ಜನಸಂಖ್ಯೆ ಹೆಚ್ಚಳದಿಂದ ಸಾಮಾಜಿಕ ಸಮಸ್ಯೆ, ಸೌಲಭ್ಯಗಳ ನಿರ್ವಹಣೆ ಕಷ್ಟವಾಗಲಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

    ತಾಲೂಕು ಆಡಳಿತ, ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಬುಧವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯೆ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

    ಭಾರತದಲ್ಲಿ 136 ಕೋಟಿಗೂ ಅಧಿಕ ಜನಸಂಖ್ಯೆ ಇದೆ. ಕೆಲ ವರ್ಷಗಳ ನಂತರ ಚೀನಾವನ್ನೂ ಮೀರಿಸಲಿದೆ. ಇದರಿಂದ ಸಾಮಾಜಿಕ ಸುಧಾರಣೆ ಮತ್ತು ಆರ್ಥಿಕ ಅಭಿವೃದ್ಧಿ ಕುಂಠಿತವಾಗುತ್ತದೆ. ಜನಸಂಖ್ಯೆಗೆ ತಕ್ಕಂತೆ ಸಂಪನ್ಮೂಲಗಳ ಸಂಗ್ರಹವಾಗಬೇಕು. ಆದರೆ, ಪ್ರಕೃತಿ ವಿಕೋಪ ಮತ್ತಿತರ ಕಾರಣಗಳಿಂದ ಸುಧಾರಣೆ ಸಾಧ್ಯವಾಗುವುದಿಲ್ಲ. ಕುಟುಂಬ ಯೋಜನೆ ಬಗ್ಗೆ ಜಾಗೃತರಾಗಬೇಕಿದೆ ಎಂದರು.

    ತಹಸೀಲ್ದಾರ್ ಎನ್.ರಘುಮೂರ್ತಿ ಮಾತನಾಡಿ, ಜನಸಂಖ್ಯೆ ಹೆಚ್ಚಳದಲ್ಲಿ ಭಾರತ ವೇಗವಾಗಿ ಬೆಳೆಯುತ್ತಿದ್ದು, ನಿಯಂತ್ರಿಸಲು ಸುಧಾರಣೆ ಕ್ರಮಗಳನ್ನು ಕಂಡುಕೊಳ್ಳಬೇಕಿದೆ. ಮುಂದಿನ ಅಪಾಯ, ಆಪತ್ತುಗಳಿಂದ ತಪ್ಪಿಸಿಕೊಳ್ಳಲು ಎಚ್ಚರ ವಹಿಸಬೇಕಿದೆ ಎಂದರು.

    ನಗರಸಭೆ ಅಧ್ಯಕ್ಷೆ ಸುಮಕ್ಕ ಅಂಜಿನಪ್ಪ, ಪ್ರಾಚಾರ್ಯ ಪ್ರೊ.ಬಿ.ಯು.ನರಸಿಂಹಮೂರ್ತಿ, ಟಿಎಚ್‌ಒ ಡಾ.ಕಾಶಿ, ಆರ್.ಪ್ರಸನ್ನಕುಮಾರ್ ಮತ್ತಿತರರು ಇದ್ದರು. ವಿದ್ಯಾರ್ಥಿನಿ ಶಾಂಭವಿ ಪ್ರಾರ್ಥಿಸಿದರು. ಡಾ.ಕೆ.ಚಿತ್ತಯ್ಯ ಸ್ವಾಗತಿಸಿ, ಎಸ್.ಬಿ.ತಿಪ್ಪೇಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts