ಚಳ್ಳಕೆರೆ: ನವದೆಹಲಿಯಲ್ಲಿ ಜ.20ರಂದು ನಡೆಯಲಿರುವ ಪ್ರಧಾನಮಂತ್ರಿಗಳ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ನಗರದ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಎಲ್.ಅಲಿಶಾ ಆಯ್ಕೆಯಾಗಿದ್ದಾಳೆ.
ರಾಜ್ಯದಿಂದ 40 ವಿದ್ಯಾರ್ಥಿಗಳು ಆಯ್ಕೆ ಆಗಿದ್ದು, ಚಿತ್ರದುರ್ಗ ಜಿಲ್ಲೆಯಿಂದ ಅಲಿಶಾ ಒಬ್ಬರೇ ಆಯ್ಕೆ ಆಗಿದ್ದಾರೆ ಎಂದು ಮುಖ್ಯಶಿಕ್ಷಕ ಕೆ.ಜಿ.ಶ್ರೀನಿವಾಸ್ ತಿಳಿಸಿದ್ದಾರೆ.