More

    ಬೆಳೆ ವಿಮೆ ಜಾಗೃತಿ ಮೂಡಿಸಲು ಸೂಚನೆ

    ಚಳ್ಳಕೆರೆ: ಚಳ್ಳಕೆರೆ ತಾಲೂಕಿನಲ್ಲಿ ಮುಂಗಾರು ಬಿತ್ತನೆ ಕುಂಠಿತವಾಗಿದೆ. ಅಲ್ಲದೇ ಬೆಳೆ ವಿಮೆ ಪಾವತಿಗೂ ರೈತರು ನಿರಾಸಕ್ತಿ ತೋರುತ್ತಿದ್ದಾರೆ. ಇದರ ಪ್ರಯೋಜನದ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ತಾಪಂ ಆಡಳಿತ ಅಧಿಕಾರಿ, ಜಂಟಿ ಕೃಷಿ ನಿರ್ದೇಶಕ ರಮೇಶ್‌ಕುಮಾರ್ ಸೂಚಿಸಿದರು.

    ತಾಪಂನಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಉದ್ದೇಶಿಸಿ ಮಾತನಾಡಿ, ಮುಂಗಾರು ಬಿತ್ತನೆಯಲ್ಲಿ ನಿರೀಕ್ಷಿತ ಗುರಿ ಸಾಧನೆ ಆಗುತ್ತಿಲ್ಲ. ಕಡಿಮೆ ಬಿತ್ತನೆ ಮತ್ತು ಬೆಳೆ ವಿಮೆ ಪಾವತಿ ಕುಂಠಿತವಾದ ವ್ಯಾಪ್ತಿಯ ರೈತರಲ್ಲಿ ಜಾಗೃತಿ ಮೂಡಿಸಿ ಎಂದು ಹೇಳಿದರು.

    ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿ ತಂದು ಕೊಡುವ ಕದ್ರಿಲೇಪಾಕ್ಷಿ ಶೇಂಗಾ ಬಿತ್ತನೆಗೆ ರೈತರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಕೆಲ ಎಣ್ಣೆ ಮಿಲ್ ಮಾಲೀಕರು ಈ ಬೆಳೆ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು, ಕ್ರಮ ಕೈಗೊಳ್ಳಿ ಎಂದು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.

    ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ಡಾ.ರವಿ ಮಾಹಿತಿ ನೀಡಿ, ತಾಲೂಕಿನ 85 ಸಾವಿರ ಹೆಕ್ಟೇರ್ ಬಿತ್ತನೆ ಗುರಿಯಲ್ಲಿ ಕೇವಲ ಶೇ.20ರಷ್ಟು ಬಿತ್ತನೆಯಾಗಿದೆ. ಮಳೆ ಕೊರತೆಯಿಂದ ಮುಂಗಾರು ಬಿತ್ತನೆ ಕುಂಠಿತವಾಗಿದೆ. ಬಿತ್ತನೆ ಬೀಜ ಮತ್ತು ಗೊಬ್ಬರ ಬಗ್ಗೆ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಸಭೆಗೆ ತಿಳಿಸಿದರು.

    ಬಿಇಒ ಕೆ.ಎಸ್.ಸುರೇಶ್ ಮಾತನಾಡಿ, ತಾಲೂಕಿನ ಕೆಲ ಗ್ರಾಮಗಳಲ್ಲಿ ಶಿಥಿಲವಾಗಿರುವ ಶಾಲೆಗಳ ದುರಸ್ತಿ ಕಾರ್ಯಕ್ಕೆ ಪರಿಶೀಲನೆ ಕಾರ್ಯ ನಡೆದಿದೆ. ಕೂಡಲೇ ಕ್ರಮ ಕೈಗೊಳ್ಳುತ್ತೇವೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ತಾಪಂ ಆಡಳಿತಾಧಿಕಾರಿ ರಮೇಶ್ ಕುಮಾರ್, ಪ್ರೌಢಶಾಲೆ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಸೌಲಭ್ಯವಿದೆ. ಸಕಾಲಕ್ಕೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳಿಗೆ ಸೌಲಭ್ಯ ಸದುಪಯೋಗ ಮಾಡಬೇಕು ಎಂದು ಬಿಇಒ ಅವರಿಗೆ ಸೂಚಿಸಿದರು.

    ತಾಪಂ ಇಒ ಹನುಮಂತಪ್ಪ ಮಾತನಾಡಿ, ಶಾಲೆಗಳಲ್ಲಿ ಬಿಸಿಯೂಟ ವೇಳೆ ಮಕ್ಕಳು ನೆಲದ ಮೇಲೆ ಕುಳಿತುಕೊಳ್ಳುವುದರಿಂದ ಗಾಳಿ, ಧೂಳು ಸಮಸ್ಯೆ ಆಗಲಿದೆ. ಅಗತ್ಯ ಶಾಲೆಗಳಿಗೆ ಊಟದ ಶೆಡ್ ನಿರ್ಮಾಣ ಮಾಡಿಕೊಳ್ಳಲು ಜಿಪಂ ಸಿಇಒ ಸೂಚಿಸಿದ್ದಾರೆ. ಇದನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಬಳಸಿಕೊಳ್ಳಬೇಕು ಎಂದು ತಿಳಿಸಿದರು.

    ಸಭೆಯಲ್ಲಿ ಪಿಆರ್‌ಡಿ ಇಲಾಖೆ ಎಇಇ ಕಾವ್ಯ, ಸಿಡಿಪಿಒ ಕೃಷ್ಣಪ್ಪ, ಎಇಇ ದಯಾನಂದ್, ಅಕ್ಷರ ದಾಸೋಹ ನಿರ್ದೇಶಕ ತಿಪ್ಪೇಸ್ವಾಮಿ, ಆರೋಗ್ಯ ಇಲಾಖೆ ಎಸ್.ಬಿ.ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿರಿದ್ದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts