More

    ಉತ್ತಮ ಪರಿಸರ ಆರೋಗ್ಯ ಸಮಾಜ

    ಚಳ್ಳಕೆರೆ: ಉತ್ತಮ ಪರಿಸರದಿಂದ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ನೆಹರು ಯುವಕ ಕೇಂದ್ರದ ಸಂಪನ್ಮೂಲ ವ್ಯಕ್ತಿ ಎಸ್.ಲಕ್ಷ್ಮಿ ಹೇಳಿದರು.

    ನಗರದ ವಿಶ್ವಭಾರತಿ ಪ್ರೌಢಶಾಲೆಯಲ್ಲಿ ಬುಧವಾರ ನೆಹರು ಯುವಕ ಕೇಂದ್ರ ಹಮ್ಮಿಕೊಂಡಿದ್ದ ಫಿಟ್ ಇಂಡಿಯಾ ಸೈಕಲ್ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಪರಿಸರ ಪೋಷಣೆಯಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಇರಬೇಕು. ಆಧುನಿಕತೆ ಬೆಳೆದಂತೆ ಮನುಷ್ಯನ ಸ್ವಾರ್ಥ ಬದಲಾವಣೆಗಾಗಿ ಪರಿಸರ ನಾಶ ಮಾಡಲಾಗುತ್ತಿದೆ. ಇದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

    ಮುಖ್ಯಶಿಕ್ಷಕ ಜಿ.ಟಿ.ವೀರಭದ್ರಸ್ವಾಮಿ, ಸಹಶಿಕ್ಷಕರಾದ ಸಚ್ಚಿದಾನಂದ, ಚನ್ನಬಸವಣ್ಣ, ಸೋಮಶೇಖರಪ್ಪ, ಮರಿಸ್ವಾಮಿ, ಗಿರೀಶ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts