More

    ಶ್ರಮಿಕರನ್ನು ಗುರುತಿಸುವಂತೆ ಎಐಟಿಯುಸಿ ಆಗ್ರಹ

    ಚಳ್ಳಕೆರೆ: ರಾಜ್ಯ ಸರ್ಕಾರ ಕ್ಷೌರಿಕ, ಮಡಿವಾಳ ಮತ್ತು ಕಟ್ಟಡ ಕಾರ್ಮಿಕರಿಗೆ ಜಾರಿ ಮಾಡಿರುವ ವಿಶೇಷ ಪ್ಯಾಕೇಜ್ ಯೋಜನೆ ಸ್ವಾಗತಿಸಿರುವ ಎಐಟಿಯುಸಿ ರಾಜ್ಯ ಸಂಚಾಲಕ ಸಿ.ವೈ.ಶಿವರುದ್ರಪ್ಪ, ಉಳಿದ ಶ್ರಮಿಕ ವರ್ಗವನ್ನು ಗುರುತಿ ಸೌಲಭ್ಯ ಒದಗಿಸುವ ಕೆಲಸವಾಗಬೇಕು ಎಂದಿದ್ದಾರೆ.

    ಗ್ರಾಮೀಣ ಭಾಗದಲ್ಲಿ ಲಾಕ್‌ಡೌನ್‌ನಿಂದ ದುಡಿಮೆ ಇಲ್ಲದೆ ಜೀವನ ನಿರ್ವಹಣೆಗೆ ಪರಿತಪಿಸುತ್ತಿರುವ ಚಮ್ಮಾರಿಕೆ, ಕಮ್ಮಾರಿಕೆ ಕಸುಬುದಾರರು ಹಾಗೂ ಎಪಿಎಂಸಿ ಮಾರುಕಟ್ಟೆಗಳಲ್ಲಿ ದುಡಿಯುತ್ತಿರುವ ಹಮಾಲಿ ವರ್ಗವನ್ನು ಈ ಯೋಜನೆಗೆ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

    ಯಾವ ಸರ್ಕಾರಗಳಿಂದಲೂ ಈವರೆಗೆ ಕಾರ್ಮಿಕ ವರ್ಗಕ್ಕೆ ನ್ಯಾಯ ಸಿಕ್ಕಿಲ್ಲ. ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುವ ಸಿಬ್ಬಂದಿಗೆ ಕನಿಷ್ಠ 18 ಸಾವಿರ ರೂ. ವೇತನ ನೀಡಬೇಕು ಎಂದು ಕೇಂದ್ರ ಸರ್ಕಾರ ಯೋಜನೆ ರೂಪಿಸಲಾಗಿತ್ತು.

    ಆದರೆ, ಇದನ್ನು ಪರಿಣಾಮಕಾರಿಯಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜಾರಿ ಮಾಡಲಿಲ್ಲ. ಇದರಿಂದ ಕೇವಲ 5, 6 ಸಾವಿರಕ್ಕೆ ದುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಾತ್ರಲ್ಲ ಇವರಿಗೆ ಯಾವುದೇ ಸೇವಾ ಭದ್ರತೆ ಸಹ ಒದಗಿಸಿಲ್ಲ ಎಂದು ದೂರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts