ಕಾಡುಗೊಲ್ಲ ಜಾತಿಪ್ರಮಾಣ ಪತ್ರ ನೀಡಿ

blank

ಚಳ್ಳಕೆರೆ: ತಾಲೂಕಿನಲ್ಲಿ ಹೆಚ್ಚಾಗಿ ವಾಸವಾಗಿರುವ ಕಾಡುಗೊಲ್ಲ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಆಗ್ರಹಿಸಿ

ತಾಲೂಕು ಕಾಡುಗೊಲ್ಲರ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ರೇಹಾನ್ ಪಾಷಾ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಜಾತಿ ಪ್ರಮಾಣ ಪತ್ರ ನೀಡಲು ಸರ್ಕಾರದ ಆದೇಶ ಇದ್ದರೂ ಅಧಿಕಾರಿಗಳು ನಿರ್ಲಕ್ಷೃ ವಹಿಸುತ್ತಿದ್ದಾರೆ. ಸಮುದಾಯದಲ್ಲಿ ಶಿಕ್ಷಣ ಜಾಗೃತಿ ಇಲ್ಲ.

ಸಾಮಾಜಿಕ ಬದಲಾವಣೆಗಾಗಿ ಸರ್ಕಾರದ ಸೌಲಭ್ಯಗಳು ಸಿಗಬೇಕಿದೆ. ಬಹುವರ್ಷಗಳ ಬೇಡಿಕೆಯಂತೆ ಕಾಡುಗೊಲ್ಲ ಹೆಸರಲ್ಲಿ ಜಾತಿ ಪ್ರಮಾಣ ಪತ್ರ ನೀಡುವ ಪದ್ಧತಿ ಜಾರಿಯಾಗಬೇಕಿದೆ.

ಆದರೆ, ತಾಲೂಕು ಆಡಳಿತ ಸ್ಪಂದಿಸುತ್ತಿಲ್ಲ. ಇದಕ್ಕೆ ಕಾರಣ ಏನೆಂಬುವುದನ್ನು ಲಿಖಿತ ರೂಪದಲ್ಲಿ ನೀಡಬೇಕೆಂದು ಪದಾಧಿಕಾರಿಗಳು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಬೂದಿಹಳ್ಳಿ ರಾಜಣ್ಣ, ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ, ಮುಖಂಡರಾದ ಜಿ.ಕೆ.ವೀರಣ್ಣ, ಪೂಜಾರಿ

ತಿಪ್ಪೇಸ್ವಾಮಿ, ಕಾಟಪ್ಪನಹಟ್ಟಿ ವೀರೇಶ್, ಸಿದ್ದಾಪುರ ಮಂಜಣ್ಣ, ಸುರೇಶ್, ಮೂರ್ತಿ, ಭದ್ರಣ್ಣ, ಮಹಲಿಂಗಪ್ಪ, ನಿಂಗಣ್ಣ ಮತ್ತಿತರರು ಇದ್ದರು.

Share This Article

ವೆಜ್​ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ Recipe

ಸ್ಟ್ರೀಟ್​ ಫುಡ್​ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…

ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips

ಹೈಹೀಲ್ಸ್​​ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…

ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್​ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…