More

    ಹೆಚ್ಚಿನ ಬೆಲೆಗೆ ಮಾಸ್ಕ್ ಮಾರಿದ್ರೆ ಕ್ರಮ

    ಚಳ್ಳಕೆರೆ: ಮಾಸ್ಕ್ ಇತರೆ ಅಗತ್ಯ ಸಾಮಗ್ರಿಗಳನ್ನು ನಿಗದಿತ ಬೆಲೆಗೆ ಮಾರಬೇಕು. ಹೆಚ್ಚಿನ ದರ ಪಡೆದರೆ ಅಂತಹ ಔಷಧ ಅಂಗಡಿಗಳ ಪರವಾನಗಿ ರದ್ದು ಮಾಡಲು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಟಿಎಚ್‌ಒ ಡಾ.ಎನ್.ಪ್ರೇಮಸುಧಾ ಎಚ್ಚರಿಸಿದರು.

    ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಹೋಟೆಲ್, ಔಷಧ ಅಂಗಡಿ ಮಾಲೀಕರಿಗೆ ಗುರುವಾರ ಹಮ್ಮಿಕೊಂಡಿದ್ದ ಕರೊನಾ ವೈರಸ್ ತಡೆ ಜಾಗೃತಿ ಸಭೆಯಲ್ಲಿ ಮಾತನಾಡಿದರು.

    ಔಷಧ ಅಂಗಡಿಗಳಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳನ್ನು ಅಕ್ರಮವಾಗಿ ದಾಸ್ತಾನು ಮಾಡುವಂತಿಲ್ಲ. ನಿಯಮ ಉಲ್ಲಂಘಿಸದಂತೆ ಎಚ್ಚರ ವಹಿಸಬೇಕು. ಹೋಟೆಲ್‌ಗಳಲ್ಲಿ ತಟ್ಟೆ, ಪಾತ್ರೆ, ಲೋಟ ಇತರ ಸಾಮಗ್ರಿಗಳನ್ನು ಬಿಸಿನೀರಿನಿಂದ ಶುಚಿಗೊಳಿಸಬೇಕು.ಅಂಗಡಿಗೆ ಬರುವ ಗ್ರಾಹಕರನ್ನು ದೂರ ದೂರ ಕೂರಿಸಿ ಆಹಾರ ನೀಡಬೇಕು. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

    ಜಿಲ್ಲಾ ಸಾಂಕ್ರಾಮಿಕ ರೋಗ ನಿಯಂತ್ರಣಾಧಿಕಾರಿ ಗಂಗಾಧರ ಮಾತನಾಡಿ, ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಹರಡುವ ಸುದ್ದಿಗಳಿಗೆ ಕಿವಿಗೊಡಬೇಡಿ. ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಿ. ಕೆಮ್ಮ, ನೆಗಡಿ, ಸೀನುವವರಿಂದ ದೂರವಿರಿ ಎಂದು ಸಲಹೆ ನೀಡಿದರು.

    ಆರೋಗ್ಯ ಇಲಾಖೆಯ ಎನ್.ಪ್ರೇಮ್‌ಕುಮಾರ್, ಎಸ್.ಬಿ.ತಿಪ್ಪೇಸ್ವಾಮಿ, ಕಾರ್ಮಿಕ ಇಲಾಖೆಯ ಶಫೀವುಲ್ಲಾ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts