ಚಳ್ಳಕೆರೆ: ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಜಾರಿ ಮಾಡಿರುವ ವಿಶೇಷ ಪ್ಯಾಕೇಜ್ ವ್ಯಾಪ್ತಿಗೆ ಎಪಿಎಂಸಿ ಹಮಾಲಿಗಳನ್ನು ಸೇರ್ಪಡೆ ಮಾಡಬೇಕೆಂದು ಎಐಟಿಯುಸಿ ಸಂಘಟನೆ ಕಾರ್ಯಕರ್ತರು ಸೋಮವಾರ ತಾಲೂಕು ಕಚೇರಿಗೆ ಮನವಿ ಸಲ್ಲಿಸಿದರು.
ಲಾಕ್‌ಡೌನ್‌ನಿಂದ ಎರಡು ತಿಂಗಳ ಕಾಲ ದಿನಗೂಲಿ ಇಲ್ಲದೆ ಹಮಾಲಿಗಳ ಜೀವನ ನಿರ್ವಹಣೆ ಕಷ್ಟವಾಗಿದೆ. ಹಮಾಲಿ ಕೆಲಸವನ್ನೇ ನಂಬಿ ಜೀವನ ನಡೆಸುತ್ತಿರುವ ಇವರೂ ಕಾರ್ಮಿಕರಾಗಿದ್ದು, ವಿಶೇಷ ಪ್ಯಾಕೇಜ್ ಅಡಿ 5 ಸಾವಿರ ಧನ ಸಹಾಯ ಮಾಡಬೇಕು ಎಂದು ಆಗ್ರಹಿಸಿ, ಶಿರಸ್ತೇದಾರ್ ಮಂಜುನಾಥ್ ಮೂಲಕ ಸರ್ಕಾರಕ್ಕೆ ಮನವಿ ವಿತರಿಸಿದರು.
ಸಂಘಟನೆ ತಾಲೂಕು ಅಧ್ಯಕ್ಷ ಕೆ.ವೀರಭದ್ರಪ್ಪ, ಪ್ರಧಾನ ಕಾರ್ಯದರ್ಶಿ ಟಿ.ತಿಪ್ಪೇಸ್ವಾಮಿ, ಟಿ.ನಿಂಗಣ್ಣ, ಎತ್ತಿನಗಾಡಿ ಕಾರ್ಮಿಕರ ಸಂಘದ ಅಧ್ಯಕ್ಷ ಗಾಡಿ ತಿಪ್ಪೇಸ್ವಾಮಿ ಮತ್ತಿತರರಿದ್ದರು.