ಚಲ್ತಿಗದ್ದೆ ಜನರಲ್ಲಿ ಆಶಾಭಾವ

Latest News

ಮೂಡಬಿದರೆಯ ತೋಡಾರು ಗ್ರಾಮದ ಅಯ್ಯಪ್ಪ ಭಕ್ತರೊಂದಿಗೆ ಹೆಜ್ಜೆ ಹಾಕುತ್ತಿರುವ ಶ್ವಾನ

ಚಿಕ್ಕಮಗಳೂರು: ತಿರುಪತಿಯಿಂದ ಶಬರಿಮಲೆಗೆ ಪಾದಯಾತ್ರೆ ಮೂಲಕ ಹೊರಟಿರುವ ಭಕ್ತರ ತಂಡದ ಜತೆ ಶ್ವಾನವೊಂದು ತೆರಳಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ...

ವಿಆರ್​ಎಲ್​ ಪ್ರಾಯೋಜಕತ್ವದ ಹಾಫ್​ ಮ್ಯಾರಥಾನ್​ಗೆ ನಟಿ ಸುಮನ್ ನಗರ್‍ಕರ್ ಚಾಲನೆ: ಗಿನ್ನೆಸ್​ ದಾಖಲೆ ಬರೆದ ಓಜಲ್ ನಲವಡಿಗೆ ಸನ್ಮಾನ

ಹುಬ್ಬಳ್ಳಿ: ವಿಆರ್​ಎಲ್ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಹಾಫ್ ಮ್ಯಾರಥಾನ್​ಗೆ ಖ್ಯಾತ ನಟಿ ಸುಮನ್ ನಗರ್‍ಕರ್ ಅವರು ಫ್ಲ್ಯಾಗ್ ಆಫ್ ಮಾಡುವ ಮೂಲಕ ಭಾನುವಾರ ಚಾಲನೆ...

16 ವರ್ಷದ ಬಾಲಕನಿಂದ ಸೋದರಸಂಬಂಧಿ ಬಾಲಕಿ ಮೇಲೆ ಅತ್ಯಾಚಾರ

ಗುರುಗ್ರಾಮ: ಹದಿನಾರು ವರ್ಷದ ಬಾಲಕನೊಬ್ಬ ಸೋದರಸಂಬಂಧಿಯ 15 ವರ್ಷದ ಬಾಲಕಿಯನ್ನು ಮಂಚಕ್ಕೆ ಕಟ್ಟಿಹಾಕಿ ಅತ್ಯಾಚಾರ ಎಸಗಿರುವ ಆರೋಪ ಹರಿಯಾಣದ ಗುರುಗ್ರಾಮ 51ನೇ ವಲಯದಲ್ಲಿ...

ಜೀಪಿಗೆ ಅಡ್ಡ ಬಂದ ಕಾಡುಕೋಣವನ್ನು ಹಿಮ್ಮೆಟ್ಟಿಸಿದ ಶ್ವಾನ: ವಿಡಿಯೋ ವೈರಲ್​

ಚಿಕ್ಕಮಗಳೂರು: ವಾಹನಕ್ಕೆ ಅಡ್ಡ ಬಂದ ಕಾಡುಕೋಣವನ್ನು ಶ್ವಾನ ಹಿಮ್ಮೆಟ್ಟಿಸಿದ ಘಟನೆಯ ವಿಡಿಯೋ ಚಿತ್ರೀಕರಣ ವೈರಲ್​ ಆಗಿದೆ. ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಕಾಫಿ ತೋಟದಲ್ಲಿ...

ಅನರ್ಹ ಪದವನ್ನೇ ಟೀಕಾಸ್ತ್ರವನ್ನಾಗಿ ಬಳಸಿಕೊಂಡು ಶ್ರೀಮಂತ್ ಪಾಟೀಲ್​ಗೆ ಟಾಂಗ್​​ ಕೊಟ್ಟ ಮಾಜಿ ಶಾಸಕ ರಾಜು ಕಾಗೆ

ಬೆಳಗಾವಿ: ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಗೆ ಅಭ್ಯರ್ಥಿಗಳ ಕಸರತ್ತು ಆರಂಭವಾಗಿದ್ದು, ಚುನಾವಣಾ ಕಣ ರಂಗೇರುತ್ತಿದೆ. ಸ್ಪರ್ಧಿ-ಪ್ರತಿಸ್ಪರ್ಧಿ ನಡುವಿನ ವಾಕ್ಸಮರ ಆರಂಭವಾಗಿದ್ದು, ಅದು...

ಶ್ರೀಪತಿ ಹೆಗಡೆ ಹಕ್ಲಾಡಿ ಕುಂದಾಪುರ
ಚಲ್ತಿಗದ್ದೆ ಬುಡಕಟ್ಟು ಸಮುದಾಯದ ಸಂಪರ್ಕ ರಸ್ತೆ ಕಾಮಗಾರಿ ಅಂತಿಮ ಘಟ್ಟ ತಲುಪಿದೆ. ಹಲವು ದಿನಗಳಿಂದ ಭೂಮಾಲೀಕರ ತಗಾದೆಯಿಂದ ನಿಂತಿದ್ದ ಕೆಲಸ ಮತ್ತೆ ಆರಂಭವಾಗಿದ್ದು, ಚಲ್ತಿಗದ್ದೆ ಬುಡಕಟ್ಟು ಜನರಲ್ಲಿ ಹೊಸ ಆಶಾಭಾವನೆ ಮೂಡಿದೆ.

ಬೈಂದೂರು ತಾಲೂಕು, ಕೊಲ್ಲೂರು ಗ್ರಾಪಂ ವ್ಯಾಪ್ತಿಯ ಚಲ್ತಿಗದ್ದೆಯಲ್ಲಿ ಬುಡಕಟ್ಟು ಜನ ವಾಸ ಮಾಡಿಕೊಂಡಿದ್ದಾರೆ. ಈ ಭಾಗದ ಜನರಿಗೆಂದು ನಕ್ಸಲ್ ಪ್ಯಾಕೇಜ್ ಯೋಜನೆ, ಪರಿಶಿಷ್ಟ ಪಂಗಡದ ಜನರು ವಾಸವಾಗಿರುವ ಪ್ರದೇಶಾಭಿವೃದ್ಧಿ ಯೋಜನೆ ಅನುದಾನ ಬಳಸಿ ಸೇತುವೆ ಹಾಗೂ ರಸ್ತೆ ಕೆಲಸ ಆರಂಭಿಸಲಾಗಿತ್ತು.

ಸ್ಥಳೀಯ ಖಾಸಗಿ ಜಮೀನ್ದಾರರೊಬ್ಬರು ರಸ್ತೆ ತನ್ನ ಜಮೀನಿನಲ್ಲಿ ಬರುವುದೆಂದು ಹೇಳಿ ರಸ್ತೆಯಲ್ಲಿ ಹೊಂಡ ಕಡಿದು ಸಂಪರ್ಕಕ್ಕೆ ತಡೆಯೊಡ್ಡಿದ್ದರು. ರಸ್ತೆ ತೆರವುಗೊಳಿಸಿ ಸಾರ್ವಜನಿಕರಿಗೆ ಸಂಪರ್ಕ ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತ್ತು. ಜಿಲ್ಲಾಧಿಕಾರಿ ಆದೇಶದಂತೆ ಅಂದಿನ ಕುಂದಾಪುರ ಸಹಾಯಕ ಕಮಿಷನರ್ ಟಿ.ಭೂಬಾಲನ್ ಹಾಗೂ ಬೈಂದೂರು ತಹಶಿಲ್ದಾರ್ ಕಿರಣ್ ಜಿ.ಗೌರಯ್ಯ ಸ್ಥಳಕ್ಕಾಗಮಿಸಿ ರಸ್ತೆ ತೆರವು ಮಾಡಿದ್ದರು.

ಗ್ರಾಪಂ ಅನುದಾನದಲ್ಲಿ ಬದಲಿ ರಸ್ತೆ: ಈ ಸಂದರ್ಭ ಕೊಲ್ಲೂರು ಗ್ರಾಪಂ ಈ ಭಾಗದ ಜನರಿಗೆ ಸಾರ್ವಜನಿಕ ಬದಲಿ ರಸ್ತೆ ನಿರ್ಮಿಸಿ ಕೊಡುವ ಭರವಸೆ ನೀಡಿತ್ತು. ಪ್ರಸಕ್ತ ಸಾಲಿನಲ್ಲಿ ಗ್ರಾಪಂ ಅನುದಾನ ಕಾದಿರಿಸಿ ಬದಲಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿತ್ತು. ಕಾಮಗಾರಿ ಬಹುತೇಕ ಮುಗಿಯುವ ಹಂತ ತಲುಪಿದಾಗ ಮತ್ತೆ ಜಮೀನ್ದಾರ ವ್ಯಕ್ತಿ ಅಡ್ಡಗಾಲು ಹಾಕಿದ್ದರಿಂದ ಕೆಲಸ ಮೊಟಕುಗೊಂಡಿತ್ತು. ಈಗ ದಲಿತ ಸಂಘರ್ಷ ಸಮಿತಿ ಮುಖಂಡರ ಸಮ್ಮುಖದಲ್ಲಿ ಪೊಲೀಸ್ ಸಹಕಾರ ಪಡೆದು ನಿಂತ ರಸ್ತೆ ಕಾಮಗಾರಿ ಆರಂಭಿಸಿದ್ದು, ಬುಡಕಟ್ಟು ಜನರಲ್ಲಿ ಸಂಪರ್ಕದ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ.

ರಸ್ತೆ ನಿರ್ಮಾಣಕ್ಕೆ ಅಡ್ಡಿ ಮಾಡುವ ತಂತ್ರ: ನಿಂತ ರಸ್ತೆ ಕಾಮಗಾರಿ ಮತ್ತೆ ಆರಂಭವಾಗಿದ್ದು, ಭೂಮಾಲೀಕರು ಮನ ಒಲಿಸಿದ್ದರೂ, ಹಿಂದಿನಿಂದ ಬೇರೆಯವರನ್ನು ಎತ್ತಿ ಕಟ್ಟುವ ಕೆಲಸ ಮಾಡಲಾಗುತ್ತಿದೆ. ರಸ್ತೆ ಮಾಡುವಾಗ ಮರ ಕಡಿಯದಿದ್ದರೂ ಅರಣ್ಯ ಇಲಾಖೆಗೆ ಸುಳ್ಳು ಮಾಹಿತಿ ನೀಡಿ ರಸ್ತೆ ನಿರ್ಮಾಣಕ್ಕೆ ಅಡ್ಡಿ ಮಾಡುವ ವ್ಯವಸ್ಥಿತ ಕೆಲಸವೂ ನಡೆಯುತ್ತಿದೆ. ಗ್ರಾಪಂ ಹೊಸದಾಗಿ ನಿರ್ಮಿಸುತ್ತಿರುವ ರಸ್ತೆಗೆ ಖಾಸಗಿ ವ್ಯಕ್ತಿ ತನಗೆ ಸಂಬಂಧಿಸದ ವಿಚಾರಕ್ಕೆ ತಕರಾರು ನೀಡಿರುವುದರಲ್ಲಿ ಹುರುಳಿಲ್ಲ. ಪಾಳೆಗಾರಿಕೆ ಮನಸ್ಥಿತಿ ಹೊಂದಿರುವವರು ಪ್ರಭಾವ ಸ್ಥಾಪಿಸಲು ಬಡವರ ಮೇಲೆ ಮಾಡುತ್ತಿರುವ ಮಾನಸಿಕ ದೌರ್ಜನ್ಯವಿದು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಾಸುದೇವ ಮುದೂರು ತಿಳಿಸಿದ್ದಾರೆ. ರಸ್ತೆ ನಿರ್ಮಾಣ ಹಾಗೂ ಪರಿಸರದ ಜನರಿಗೆ ಕಿರುಕುಳ ನೀಡಿದರೆ ದಲಿತ ಸಂಘರ್ಷ ಸಮಿತಿ ಉಗ್ರ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದ್ದಾರೆ.

ವಿಜಯವಾಣಿ ವರದಿಗೆ ಸ್ಪಂದನೆ
ಕೊಲ್ಲೂರು ಗ್ರಾಮ ಮಾವಿನಕಾರು ಬುಡಕಟ್ಟು ಜನರ ಸಂಚಾರ ಸಂಪರ್ಕ ಅವ್ಯವಸ್ಥೆ ಬಗ್ಗೆ ವಿಜಯವಾಣಿ ವಿಸ್ತೃತ ವರದಿ ಮಾಡಿತ್ತು. ವರದಿ ಗಮನಸಿದ ಅಂದಿನ ಎಸಿ ಟಿ.ಭೂಬಾಲನ್ ಹಾಗೂ ಬೈಂದೂರು ತಹಸೀಲ್ದಾರ್ ಕಿರಣ್ ಜಿ.ಗೌರಯ್ಯ ಬುಡಕಟ್ಟು ಜನರ ಸಂಚಾರ ಮಾಡುವ ರಸ್ತೆ ದಿಗ್ಬಂಧನ ತೆರವು ಮಾಡಿ, ಬದಲಿ ರಸ್ತೆಯ ನಿರ್ಮಿಸುವ ಭರವಸೆ ನೀಡಿದ್ದರು. ಬದಲಿ ರಸ್ತೆ ಆಗುವ ತನಕ ಈಗಿದ್ದ ರಸ್ತೆ ಸಂಚಾರಕ್ಕೆ ತಡೆ ಒಡ್ಡಬಾರದು. ಹಾಗೇನಾದರೂ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ರಸ್ತೆ ತಡೆಹಾಕಿದ ವ್ಯಕ್ತಿಗೆ ಎಚ್ಚರಿಕೆ ನೀಡಿದ್ದರು. ಚಲ್ತಿಗದ್ದೆ ಸಂಚಾರ ಸಂಪರ್ಕ ಕುರಿತು ವಿಜಯವಾಣಿ ಎರಡು ಬಾರಿ ವರದಿ ಮಾಡಿತ್ತು.

ಗ್ರಾಪಂನಿಂದ ಹಿಡಿದು ರಾಜ್ಯಮಟ್ಟದವರೆಗೆ ದಲಿತರ ಸಮಸ್ಯೆ ಪರಿಹಾರಕ್ಕೆ ಹೋರಾಟ ಮಾಡಬೇಕಾದ ಅನಿವಾರ್ಯತೆ ಬಂದಿದ್ದು ನಿಜಕ್ಕೂ ನಾಚಿಕೆಗೇಡು. ಕಾನೂನಿನ ಮೇಲೆ ಗೌರವವಿಟ್ಟು ದಲಿತ ಸಂಘರ್ಷ ಸಮಿತಿ ಹೋರಾಟ ಮಾಡುತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮಸ್ಯೆ ಪರಿಹಾರ ನಿಟ್ಟಿನಲ್ಲಿ ಕಾನೂನಿನಂತೆ ನಡೆದು ಸಾಕಾಗಿದೆ. ಚಲ್ತಿಗದ್ದೆ ಸಂಪರ್ಕ ವ್ಯವಸ್ಥೆ ಬಗ್ಗೆ ಹೋರಾಟ ಮಾಡಿ, ಅಂತಿಮ ಹಂತಕ್ಕೆ ಬಂದು ರಸ್ತೆಗೆ ಮತ್ತೆ ತಡೆ ಒಡ್ಡಿದರೆ, ದಲಿತ ಸಂಘರ್ಷ ಸಮಿತಿ ಸ್ಥಳದಲ್ಲಿ ಮೊಕ್ಕಾಂ ಹೂಡಿ ಬುಡಕಟ್ಟು ಜನರ ಸಂಪರ್ಕ ವ್ಯವಸ್ಥೆ ಪೂರ್ಣ ಮಾಡಲು ಹಿಂದೆ ಮುಂದೆ ನೋಡುವುದಿಲ್ಲ.
ಕೆ.ಸಿ.ರಾಜು ಬೆಟ್ಟಿನಮನೆ ಅಧ್ಯಕ್ಷ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ತಾಲೂಕು ಸಮಿತಿ

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....