ಅಪರಿಚಿತ ವ್ಯಕ್ತಿ ಶವ ಪತ್ತೆ

ಗುಂಡ್ಲುಪೇಟೆ: ತಾಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಹಳ್ಳ ಕೆರೆಯಲ್ಲಿ ಸುಮಾರು 60 ವರ್ಷ ವಯಸ್ಸಿನ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ. ಸಮೀಪದ ಪೊದೆಯಲ್ಲಿ ಮೃತರ ಬಟ್ಟೆಗಳು ಪತ್ತೆಯಾಗಿವೆ. ಮೂರು ದಿನಗಳ ಹಿಂದೆ ಕೆರೆಯಲ್ಲಿ ಮುಳುಗಿದ್ದು ಸೋಮವಾರ ಮಧ್ಯಾಹ್ನ ಶವ ನೀರಿನ ಮೇಲೆ ತೇಲುವುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ಪೊಲೀಸರು ಕೆರೆಯಿಂದ ಮೃತದೇಹವನ್ನು ಹೊರತೆಗೆಸಿ ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ.

Leave a Reply

Your email address will not be published. Required fields are marked *