Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಹಲ್ಲೆಗೆ ಯತ್ನಿಸಿದ್ದ ರೆಸಾರ್ಟ್ ಮಾಲೀಕನ ಬಂಧನ

Tuesday, 07.08.2018, 5:01 AM       No Comments

ಗುಂಡ್ಲುಪೇಟೆ: ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಅನುಮತಿಯಿಲ್ಲದೆ ರೆಸಾರ್ಟ್ ನಿರ್ಮಾಣ ಮಾಡಿರುವ ಬಗ್ಗೆ ವಿಚಾರಣೆಗೆ ಸ್ಥಳಕ್ಕೆ ತೆರಳಿದ್ದ ಆರ್‌ಎಫ್‌ಒ ಮೇಲೆ ಹಲ್ಲೆ ಮಾಡಲೆತ್ನಿಸಿದ್ದ ಆರೋಪದ ಮೇಲೆ ರೆಸಾರ್ಟ್ ಮಾಲೀಕನನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.
ಬಂಡೀಪುರ ಹುಲಿ ಯೋಜನೆಯ ಗೋಪಾಲಸ್ವಾಮಿಬೆಟ್ಟ ವಲಯದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಅನುಮತಿಯಿಲ್ಲದೆ ರೆಸಾರ್ಟ್ ನಿರ್ಮಾಣ ಮಾಡುತ್ತಿದ್ದ ಮಾಲೀಕ ಸುನಿಲ್ ಎಂಬುವರಿಗೆ ನೊಟೀಸ್ ನೀಡಲು ಆರ್‌ಎಫ್‌ಒ ಪುಟ್ಟಸ್ವಾಮಿ ಮತ್ತು ಸಿಬ್ಬಂದಿ ಹೋಗಿದ್ದರು. ಇವರ ಮೇಲೆ ಸುನಿಲ್ ಹಲ್ಲೆ ನಡೆಸಲು ಮುಂದಾಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ. ಈ ಬಗ್ಗೆ ಭಾನುವಾರ ಪಟ್ಟಣ ಪೊಲೀಸರಿಗೆ ಅಧಿಕಾರಿ ದೂರು ನೀಡಿದ್ದರು.
ಈ ಬಗ್ಗೆ ಸ್ಥಳಕ್ಕೆ ತೆರಳಿದ ಸರ್ಕಲ್ ಇನ್ಸ್‌ಪೆಕ್ಟರ್ ಎಚ್.ಎನ್.ಬಾಲಕೃಷ್ಣ ಹಾಗೂ ಪಿಎಸ್‌ಐ ಬಿ.ಎಸ್.ಶಿವರುದ್ರ ಮಹಜರು ನಡೆಸಿ ಆರೋಪಿಯನ್ನು ವಶಕ್ಕೆ ಪಡೆದರು. ನಂತರ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

Leave a Reply

Your email address will not be published. Required fields are marked *

Back To Top