More

    ಗ್ರಾಮಗಳಿಗೆ ಮೂಲಸೌಕರ್ಯ ಕಲ್ಪಿಸಿಕೊಡಿ

    ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮ ಸಭೆ ನಡೆಯಿತು.

    ಸಭೆಯಲ್ಲಿ ಗೊರಸಾಣೆ ಗ್ರಾಮಸ್ಥರು ಮಾತನಾಡಿ, ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀರಾ ಹದಗೆಟ್ಟಿದೆ. ಇದರಿಂದ ಸಂಚರಿಸಲು ತುಂಬಾ ತೊಂದರೆಯಾಗಿದೆ. ಆದ್ದರಿಂದ ಸಿಸಿ ರಸ್ತೆ ನಿರ್ಮಿಸಿಕೊಡುವಂತೆ ಮನವಿ ಮಾಡಿದರು. ಊರ ಬಸಪ್ಪನ ಒಡ್ಡು ಗ್ರಾಮಸ್ಥರು ಮಾತನಾಡಿ, ಬೇಸಿಗೆ ವೇಳೆ ನೀರಿನ ಸಮಸ್ಯೆ ಇತ್ತು. ಆದರೀಗ ಉತ್ತಮ ಮಳೆಯಾಗುತ್ತಿರುವುದರಿಂದ ಸಮಸ್ಯೆ ನೀಗಿದೆ. ಆದರೆ ನೀರು ಪೂರೈಕೆಯಾಗುವ ಪೈಪ್‌ಲೈನ್‌ನಲ್ಲಿ ಅಲ್ಲಲ್ಲಿ ರಂಧ್ರವಾಗಿದ್ದು, ದುರಸ್ತಿಪಡಿಸುವಂತೆ ಮನವಿ ಮಾಡಿದರು. ಇದಕ್ಕೆ ಪಿಡಿಒ ಕಿರಣ್ ಅವರು ಅಗತ್ಯ ಕ್ರಮವಹಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.

    ಸಂತ್ರಸ್ತರಿಂದ ಮಾಹಿತಿ: ಸುಳ್ವಾಡಿ ವಿಷ ಪ್ರಸಾದ ಸೇವನೆ ಪ್ರಕರಣದಲ್ಲಿ ಮ.ಬೆಟ್ಟ ಗ್ರಾಪಂ ವ್ಯಾಪ್ತಿಯ 18 ಆರೋಗ್ಯ ಬಾಧಿತ ಸಂತ್ರಸ್ಥರಿಗೆ ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಮೇ.25 ರಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪೌಷ್ಟಿಕ ಆಹಾರ ಪದಾರ್ಥಗಳನ್ನು ವಿತರಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಸಭೆಯಲ್ಲಿ ಸಂತ್ರಸ್ತರಿಂದ ಮಾಹಿತಿ ಪಡೆಯಲಾಯಿತು.

    1.19 ಕೋಟಿ ರೂ. ವೆಚ್ಚದ ಕಾಮಗಾರಿ: ಸಭೆಯಲ್ಲಿ ನರೇಗಾ ಯೋಜನೆಯ ತಾಲೂಕು ವ್ಯವಸ್ಥಾಪಕ ಸಿದ್ದಪ್ಪಾಜಿ ಮಾತನಾಡಿ, ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ನರೇಗಾ ಯೋಜನೆಯಡಿ ಒಂದು ವರ್ಷದ ಅವಧಿಯಲ್ಲಿ ಮನೆ ನಿರ್ಮಾಣಕ್ಕೆ ಸಹಾಯಧನ, ಕೃಷಿ ಹೊಂಡ ನಿರ್ಮಾಣ, ಕೊಟ್ಟಿಗೆ, ಚರಂಡಿ, ಸಿಸಿ ರಸ್ತೆ, ಚೆಕ್ ಡ್ಯಾಂ, ಶೌಚಗೃಹ, ಕಿರು ಸೇತುವೆ ನಿರ್ಮಾಣ ಹಾಗೂ ಕೆರೆ ಅಭಿವೃದ್ಧಿ, ರಿವಿಟ್‌ಮೆಂಟ್ ಕಾಮಗಾರಿ, ಕಾಲುವೆಗಳಲ್ಲಿ ಹೂಳೆತ್ತುವ ಕಾಮಗಾರಿ ಸೇರಿದಂತೆ 163 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, 1,19,640,540 ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ನರೇಗಾ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಯ ವಿವರವನ್ನು ಮಂಡಿಸಲಾಯಿತು. ಸಭೆಯಲ್ಲಿ ಮುಖ್ಯ ಶಿಕ್ಷಕ ಚೆಲುವರಾಜು, ಗ್ರಾಪಂ ನೌಕರರಾದ ಮಹೇಶ್, ಗೋಫಿ ಹಾಗೂ ಗ್ರಾಮಸ್ಥರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts