More

    ವಾಹನ ಡಿಕ್ಕಿಯಾಗಿ ಕಾರ್ಮಿಕ ಸ್ಥಳದಲ್ಲೇ ಸಾವು

    ಯಳಂದೂರು: ತಾಲೂಕಿನ ಉಪ್ಪಿನ ಮೋಳೆ ಗ್ರಾಮದ ಬಳಿ ಭಾನುವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

    ತಾಲೂಕಿನ ಯರಗಂಬಳ್ಳಿ ಗ್ರಾಮದ ಚಿಕ್ಕನಿಂಗಶೆಟ್ಟಿ (31) ಮೃತ. ಯಳಂದೂರಿನಿಂದ ಸ್ವಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟ. ಯಳಂದೂರು ಪೊಲೀಸರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts