More

    ತಂತ್ರಜ್ಞಾನ ಬಳಸಿ ಆಲೆಮನೆಗಳ ಅಭಿವೃದ್ಧಿ ಮಾಡಿ

    ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚನೆ, ಆಲೆಮನೆಗಳ ಬಲವರ್ಧನೆ ಸಂಬಂಧ ಸಭೆ

    ಚಾಮರಾಜನಗರ: ಜಿಲ್ಲೆಯಲ್ಲಿರುವ ಆಲೆಮನೆಗಳನ್ನು ತಂತ್ರಜ್ಞಾನದ ಬಳಕೆಯಿಂದ ಮತ್ತಷ್ಟು ಸುಧಾರಿಸಿ ಮಾರುಕಟ್ಟೆಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸಮಿತಿಯೊಂದನ್ನು ರಚಿಸಿ ಜಿಲ್ಲಾಡಳಿತಕ್ಕೆ ಒಂದು ತಿಂಗಳೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅಧಿಕಾರಿಗಳಿಗೆ ಸೂಚಿಸಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ಆಲೆಮನೆಗಳ ಬಲವರ್ಧನೆ ಸಂಬಂಧ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅನೇಕ ಆಲೆಮನೆಗಳು ಹಿಂದಿನ ಪಾರಂಪರಿಕ ಪದ್ಧ್ದತಿಯನ್ನು ಅನುಸರಿಸುತ್ತಿವೆ. ಪ್ರಸ್ತುತ ಆಲೆಮನೆಗಳನ್ನು ತಾಂತ್ರಿಕವಾಗಿ ಆಧುನೀಕರಿಸಲು ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ. ಇದರಿಂದ ಆದಾಯವೂ ಹೆಚ್ಚಾಗಲಿದೆ ಎಂದು ತಿಳಿಸಿದರು.
    ಸಮಿತಿ ರಚನೆ: ತಹಸೀಲ್ದಾರರು, ಕೃಷಿ ಇಲಾಖೆ ಅಧಿಕಾರಿಗಳು, ಸಾವಯವ ಕೃಷಿ ಕೈಗೊಂಡಿರುವ ರೈತ ಪ್ರತಿನಿಧಿಗಳು, ಸಹಕಾರ, ಕೃಷಿ ಮಾರುಕಟ್ಟೆ ಸಮಿತಿ ಇಲಾಖೆ ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಬೇಕು. ಸಮಿತಿಯು ಮಂಡ್ಯ ಜಿಲ್ಲೆಯಲ್ಲಿರುವ ಆಲೆಮನೆಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿ ಪರಿಶೀಲಿಸಿ ಜಿಲ್ಲೆಯ ಆಲೆಮನೆಗಳ ಅಭಿವೃದ್ಧಿಗೆ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಆಲೆಮನೆ ನಡೆಸುವವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಬ್ಯಾಂಕುಗಳು ಸಾಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.
    ಮಾರುಕಟ್ಟೆಯಲ್ಲಿ ಪಾಲ್ಗೊಳ್ಳಲು ಹೆಚ್ಚು ಉತ್ತೇಜನ ನೀಡಬೇಕು. ಉತ್ಪನ್ನದಲ್ಲಿ ಗುಣಮಟ್ಟ ಹೆಚ್ಚಿಸಿಕೊಳ್ಳುವುದರ ಬಗ್ಗೆ ಅರಿವು ಮೂಡಿಸಬೇಕು. ತಯಾರಿಕೆ ವಿಧಾನದಲ್ಲಿ ಇನ್ನಷ್ಟು ಸುಧಾರಣೆ, ಶುಚಿತ್ವ ಕಾಪಾಡಿಕೊಳ್ಳುವುದರೊಂದಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ವಹಿವಾಟು, ರಫ್ತಿಗೆ ಪ್ರೋತ್ಸಾಹಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
    ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಉಪವಿಭಾಗಾಧಿಕಾರಿ ನಿಖಿತಾ ಎಂ.ಚಿನ್ನಸ್ವಾಮಿ, ತಹಸೀಲ್ದಾರ್‌ಗಳಾದ ಜೆ.ಮಹೇಶ್, ಕೆ.ಕುನಾಲ್, ನಂಜುಂಡಯ್ಯ, ಬಸವರಾಜ ಚಿಗರಿ, ಲೀಡ್ ಬ್ಯಾಂಕ್ ವ್ಯವಸ್ತಾಪಕರಾದ ಸುನಂದಾ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts