More

    ಕಪ್ಪುಪಟ್ಟಿ ಧರಿಸಿ ನೌಕರರ ಪ್ರತಿಭಟನೆ

    ವಿದ್ಯುತ್ ಕಾಯ್ದೆ ತಿದ್ದುಪಡಿಗೆ ವಿರೋಧ

    ಚಾಮರಾಜನಗರ: 2003ರ ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಸಮಿತಿ ನೌಕರರು ಸೋಮವಾರ ನಗರದ ಸೆಸ್ಕ್ ಉಪ ವಿಭಾಗ ಕಚೇರಿ ಎದುರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
    ಸರ್ಕಾರ ವಿದ್ಯುತ್ ಸರಬರಾಜನ್ನು ಖಾಸಗೀಕರಣ ಮಾಡಲು ಹೊರಟಿರುವುದರಿಂದ ನೌಕರರು ಹಾಗೂ ಗ್ರಾಹಕರಿಗೆ ತೀವ್ರ ತೊಂದರೆ ಉಂಟಾಗಲಿದೆ. ಆದ್ದರಿಂದ ಕೂಡಲೇ ತಿದ್ದುಪಡಿ ಮಸೂದೆಯನ್ನು ಹಿಂಪಡೆಯಬೇಕು. ರೈತರು ಹಾಗೂ ಗ್ರಾಹಕರು ಸರ್ಕಾರದಿಂದ ದೊರೆಯುವ ಹಲವು ಸೌಲಭ್ಯಗಳಿಗೆ ವಂಚಿತರಾಗಲಿದ್ದಾರೆ. ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಹಾಗೂ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೂ ಸಹಾಯಧನ ಹಂತ ಹಂತವಾಗಿ ಕಡಿಮೆಯಾಗಲಿದ್ದು, ರೈತರು ಬೆಳೆಯುವ ಆಹಾರ ಉತ್ಪಾದನೆಗೂ ಸಮಸ್ಯೆಯಾಗಲಿದೆ. ತಕ್ಷಣ ಖಾಸಗೀಕರಣ ಮಸೂದೆಯನ್ನು ಕೈ ಬಿಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
    ನೌಕರರ ಸಂಘದ ಅಧ್ಯಕ್ಷ ಮುರುಳಿ ಕೃಷ್ಣ, ಸಂಘಟನಾ ಕಾರ್ಯದರ್ಶಿ ಮಹೇಶ್, ಕಾರ್ಯದರ್ಶಿ ಸಿದ್ದರಾಜಪ್ಪ, ಲೆಕ್ಕಾಧಿಕಾರಿ ಭಾಸ್ಕರ್, ಕಲ್ಯಾಣ ಸಂಸ್ಥೆ ಅಧ್ಯಕ್ಷ ಸಿದ್ದರಾಜ್, ಉಪಾಧ್ಯಕ್ಷ ಮಂಜುನಾಥ್, ಖಜಾಂಚಿ ರಮೇಶ್, ಕಲ್ಯಾಣ ಸಂಸ್ಥೆ ನಿರ್ದೇಶಕ ಮಂಜುನಾಥ್ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts