More

    ಮೌಢ್ಯದಿಂದ ಹೊರಬನ್ನಿ

    ಚಾಮರಾಜನಗರ: ಜನರು ಮೌಢ್ಯದಿಂದ ಹೊರಬಂದು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿದರು.

    ಗುಂಡ್ಲುಪೇಟೆ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘ ಹಾಗೂ ನಾಮಫಲಕ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಸಂವಿಧಾನ ರಚಿಸಿದ ಡಾ. ಬಿ.ಆರ್.ಅಂಬೇಡ್ಕರ್ ತಮ್ಮ ಜೀವನವನ್ನು ಶೋಷಿತ ಹಾಗೂ ಹಿಂದುಳಿದ ವರ್ಗಗಳ ದನಿಯಾಗಿದ್ದರು. ಈ ವರ್ಗಗಳ ಏಳಿಗೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಶೈಕ್ಷಣಿಕವಾಗಿ ಮುಂದುವರೆದರೆ ಮಾತ್ರ ಅಭಿವೃದ್ದಿ ಸಾಧ್ಯ ಎಂಬುದನ್ನು ತಿಳಿಸಿದ್ದರು.

    ಮಂತ್ರಕ್ಕೆ ಮಾವಿನ ಕಾಯಿ ಉದುರುವುದಿಲ್ಲ, ಆದ್ದರಿಂದ ಹಿಂದುಳಿದ ಸಮುದಾಯಗಳ ಜನರು ಮೌಢ್ಯಗಳಿಂದ ಹೊರಬಂದು ವೈ ಜ್ಞಾನಿಕ ಚಿಂತನೆಗಳನ್ನು ಅಳವಡಿಸಿಕೊಂಡರೆ ಮಾತ್ರ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಹೇಳಿದರು. ಕೆಪಿಸಿಸಿ ಕಾರ್ಯಾದ್ಯಕ್ಷ ಆರ್.ಧ್ರುವನಾರಾಯಣ್, ಮಾಜಿ ಸಂಸದ ಎ.ಸಿದ್ದರಾಜು, ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ್‌ಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿರಾಜು, ಪುರಸಭೆ ಸದಸ್ಯ ಅಣ್ಣಯ್ಯಸ್ವಾಮಿ, ಮುಖಂಡರಾದ ಆನಂದ್, ಕೆಂಪರಾಜು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts