More

    ಬ್ಯಾಗ್ ರಹಿತ ಶಾಲಾ ದಿನ

    ಚಾಮರಾಜನಗರ: ವಾರದಲ್ಲಿ ಒಂದು ದಿನ ಬ್ಯಾಗ್ ರಹಿತ ಶಾಲಾ ದಿನ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್ ಹೇಳಿದರು.
    ನಗರದ ಸಿ.ಆರ್.ಬಾಲರಪಟ್ಟಣ ಶಾಲೆಯಲ್ಲಿ ಜಿಲ್ಲಾಡಳಿತ, ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಖಾಸಗಿ ಶಾಲೆಗಳು ಬ್ಯಾಗ್‌ನ ಹೊರೆ ಹೆಚ್ಚಿಸುತ್ತಿವೆ. ಕೇವಲ ಓದುವುದು, ಅಂಕ ಗಳಿಸುವುದಷ್ಟೇ ಶಿಕ್ಷಣವಲ್ಲ. ಹಾಗಾಗಿ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತ ಶಾಲೆ ನಡೆಸಲಾಗುವುದು ಎಂದರು.
    ಶ್ರೀಮಂತರ ಮಕ್ಕಳು ಬೇಸಿಗೆ ರಜೆಯಲ್ಲಿ ಶಿಬಿರಗಳಿಗೆ ಸೇರಿಕೊಳ್ಳುತ್ತಾರೆ. ಅದರಂತೆ ಸರ್ಕಾರಿ ಶಾಲೆಗಳ ಮಕ್ಕಳಿಗೂ ‘ಬೇಸಿಗೆ ಸಂಭ್ರಮ’ ನಡೆಸಲು ತೀರ್ಮಾನಿಸಲಾಗಿದೆ. ಕಲೋತ್ಸವಗಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ತರಲು ಉತ್ತಮ ವೇದಿಕೆಯಾಗಿವೆ ಎಂದರು ಹೇಳಿದರು.
    ಜಿಪಂ ಅಧ್ಯಕ್ಷೆ ಶಿವಮ್ಮ, ಜಿಪಂ ಸದಸ್ಯರಾದ ಸಿ.ಎನ್.ಬಾಲರಾಜು, ಸದಾಶಿವ ಮೂರ್ತಿ, ಬಾಲರಾಜು, ತಾಪಂ ಉಪಾಧ್ಯಕ್ಷ ಜಿ.ಬಸವಣ್ಣ, ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಪಂ ಸಿಇಒ ಬಿ.ಎಚ್.ನಾರಾಯಣ್ ರಾವ್, ಎಸ್ಪಿ ಎಚ್.ಡಿ.ಆನಂದ್‌ಕುಮಾರ್, ಡಿಡಿಪಿಐ ಮಂಜುನಾಥ್ ಸೇರಿದಂತೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts