Wednesday, 14th November 2018  

Vijayavani

ಆ್ಯಂಬಿಡೆಂಟ್ ಕೋಟಿ ಕೋಟಿ ಡೀಲ್ ಪ್ರಕರಣ - ಕೆಲವೇ ಕ್ಷಣಗಳಲ್ಲಿ ಜಾಮೀನು ಅರ್ಜಿ ತೀರ್ಪು- ಬಿಡುಗಡೆಯಾಗ್ತಾರಾ ಗಣಿಧಣಿ..?        ನಾನು ಸಕ್ಕರೆ, ಮಾಧ್ಯಮಗಳು ಇರುವೆ - ನಾನು ಹೋದ್ಕಡೆ ನನ್ನನ್ನೇ ಹಿಂಬಾಲಿಸುತ್ತಾರೆ -  ಜಂಭ ಕೊಚ್ಚಿಕೊಂಡ ನಟಿ ಶ್ರುತಿ        ನಮ್ಮ ತಂದೆನೂ ಬ್ರಾಹ್ಮಣರನ್ನ ಸೋಲಿಸಿದ್ರು - ನಾನೂ ಈಗ ಬ್ರಾಹ್ಮಣರ ವ್ಯಕ್ತಿಯನ್ನು ಸೋಲಿಸಿದ್ದೇನೆ - ಸಿದ್ದು ನ್ಯಾಮಗೌಡ ಹೇಳಿಕೆ        ಮಹದಾಯಿ ನದಿ ನೀರು ಹಂಚಿಕೆ ವಿಚಾರ - ಇದೇ 17ರಂದು ಸರ್ವೆ ಪಕ್ಷ ಸಭೆ ಕರೆ ಸಿಎಂ- ಬಿಎಸ್​ವೈ, ದಿನೇಶ್​ ಗುಂಡೂರಾವ್​ಗೆ ಪತ್ರ        ರಫೇಲ್ ಖರೀದಿ ಅವ್ಯವಹಾರ ಆರೋಪ - ಸುದೀರ್ಘ 5 ಗಂಟೆಗಳ ಕಾಲ ನಡೆದ ವಿಚಾರಣೆ ಮುಕ್ತಾಯ - ತೀರ್ಪು ಕಾಯ್ದಿರಿಸಿದ ಸುಪ್ರೀಂ        ವೈಟ್​​ಹೌಸ್​​ನಲ್ಲಿ ದೀಪಾವಳಿ ಸಂಭ್ರಮ - ದೀಪ ಬೆಳಗಿ ಹಿಂದುಗಳಿಗೆ ಶುಭಕೋರಿದ ಟ್ರಂಪ್ - ಮೋದಿ ನನ್ನ ಸ್ನೇಹಿತ ಎಂದ ಟ್ರಂಪ್​       
Breaking News

ಸಚಿವರಾದ ಮರುದಿನವೇ ಶಾಲೆ ಬಿಟ್ಟ ಮಕ್ಕಳನ್ನು ಭೇಟಿ ಮಾಡಿದ ಶಿಕ್ಷಣ ಸಚಿವ

Monday, 11.06.2018, 1:06 PM       No Comments

ಚಾಮರಾಜನಗರ: ಸಚಿವರಾದ ಮರುದಿನವೇ ಶಾಲೆಗೆ ಬಿಟ್ಟ ಮಕ್ಕಳನ್ನು ಮಾತನಾಡಿಸಿ ಶಾಲೆಗೆ ಹೋಗದಿರುವುದಕ್ಕೆ ಕಾರಣ ಕೇಳಿ ಕಳಕಳಿ ವ್ಯಕ್ತಪಡಿಸಿದ್ದಾರೆ. ಮರಳಿ ಶಾಲೆಗೆ ಹೋಗುವಂತೆ ನೂತನ ಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಪ್ರೇರೇಪಿಸಿದ್ದಾರೆ.

ಈ ಸಂಬಂಧ ಮಕ್ಕಳ ಜತೆ ತೆಗೆಸಿಕೊಂಡಿರುವ ಫೋಟೋ ಎಲ್ಲೆಡೆ ವೈರಲ್​ ಆಗಿದ್ದು, ನೂತನ ಸಚಿವರ ಶಿಕ್ಷಣ ಕಾಳಜಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಅಲ್ಲದೆ, ನೆಟ್ಟಿಗರು ಶಿಕ್ಷಣ ಸುಧಾರಣೆ ಸಂಬಂಧ ತಮ್ಮ ಧ್ವನಿಯನ್ನು ಸಚಿವರ ಮುಂದಿಟ್ಟಿದ್ದಾರೆ.

ಸಚಿವರಾದ ಬಳಿಕ ಭಾನುವಾರ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿ ಕೊಳ್ಳೇಗಾಲ ಹಾಗೂ ಸಂತೇಮರಳ್ಳಿಯಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಜನರಿಗೆ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಮಹೇಶ್ ಅವರು ಜನರ ಮುಂದೆ ಮಂಡಿಯೂರಿ ನಾನು ಸಚಿವರಾಗಿದ್ದು ನಿಮ್ಮಿಂದ ಎಂದು ತಲೆ ಬಗ್ಗಿಸಿ ಕೈ ಮುಗಿದು ಕೃತಜ್ಞತೆ ಸಲ್ಲಿಸಿದ್ದರು. ಮತದಾರರ ಮುಂದೆ ಚುನಾವಣೆಗೂ ಮೊದಲು ಮಾತ್ರ ಕೈ ಮುಗಿಯುವವರ ನಡುವೆ ಮಹೇಶ್​ ವಿಭಿನ್ನ ಎನಿಸಿದರು.

ಟೀಕೆ ಬಾರದಂತೆ ಕಾರ್ಯನಿರ್ವಹಿಸುತ್ತೇನೆ
ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಸೋಮವಾರ ಅಧಿಕಾರಿಗಳ ಸಭೆ ಕರೆದು ಇಲಾಖೆ ಬಗ್ಗೆ ಮಾಹಿತಿ ಪಡೆಯುತ್ತೇನೆ. ಯಾರಿಂದಲೂ ಟೀಕೆ ಬಾರದಂತೆ ಕಾರ್ಯನಿರ್ವಹಿಸುತ್ತೇನೆ. ಸಮ್ಮಿಶ್ರ ಸರ್ಕಾರ 5 ವರ್ಷ ಪೂರೈಸುವುದು ಗ್ಯಾರಂಟಿ. ಸಿಎಂ ಕುಮಾರಸ್ವಾಮಿಗೆ ತಾಳ್ಮೆ ಇದೆ. 5 ವರ್ಷ ಪೂರೈಸುತ್ತಾರೆ. ಬಹುಮತ ಪಡೆದ ಸರ್ಕಾರಕ್ಕಿಂತ ಸಮ್ಮಿಶ್ರ ಸರ್ಕಾರ ಎರಡರಷ್ಟು ಕೆಲಸ ಮಾಡಲಾಗುತ್ತದೆ ಎಂಬ ಭರವಸೆ ನೀಡಿದರು.

Leave a Reply

Your email address will not be published. Required fields are marked *

Back To Top