16 C
Bangalore
Thursday, December 12, 2019

ಗಂಗಾ ಕಲ್ಯಾಣಕ್ಕೆ ವಿದ್ಯುತ್ ನೀಡದ್ದಕ್ಕೆ ಆಕ್ರೋಶ

Latest News

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಚಾಮರಾಜನಗರ: ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳ ಜಮೀನುಗಳಲ್ಲಿ ಕೊರೆಯಲಾಗುವ ಬೋರ್‌ವೆಲ್‌ಗಳಿಗೆ ವಿದ್ಯುತ್ ಸಂಪರ್ಕ ನೀಡುವಲ್ಲಿ ಆಗುತ್ತಿರುವ ತೀವ್ರ ವಿಳಂಬದ ಬಗ್ಗೆ ಜಿಲ್ಲಾ ಪಂಚಾಯಿತಿ ಮಾಸಿಕ ಕೆಡಿಪಿ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.

ನಗರದ ಜಿಲ್ಲಾ ಪಂಚಾಯಿತಿಯ ನೂತನ ಸಭಾಂಗಣದಲ್ಲಿ ಗುರುವಾರ ಜಿಪಂ ಅಧ್ಯಕ್ಷರಾದ ಶಿವಮ್ಮ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಬೋರ್‌ವೆಲ್‌ಗಳಿಗೆ ವಿದ್ಯುತ್ ಸಂಪರ್ಕ ನೀಡಲು ಆಗುತ್ತಿರುವ ತೊಡಕುಗಳೇನು? ಅವುಗಳ ಪರಿಹಾರ ಹೇಗೆಂಬುದರ ಕುರಿತಾಗಿ ಚರ್ಚೆಯಾಯಿತು.

ಜಮೀನುಗಳಲ್ಲಿ ತಂತಿಗಳು ಜೋತು ಬಿದ್ದಿರುವುದು ಮತ್ತು ಕಂಬಗಳು ಬಾಗಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದಿವೆ. ಗ್ರಾಮೀಣ ಪ್ರದೇಶಗಳಲ್ಲಿ ಬೆಳಗಿನ ಸಮಯದಲ್ಲೂ ಬೀದಿ ದೀಪಗಳು ಉರಿಯುತ್ತಿವೆ. ಈ ಕುರಿತಾಗಿ ಪರಿಶೀಲಿಸಿ ಏನಾದರೂ ಕ್ರಮ ಕೈಗೊಂಡಿದ್ದೀರಾ ಎಂದು ಜಿಪಂ ಉಪಾಧ್ಯಕ್ಷ ಜೆ.ಯೋಗೇಶ್ ಅವರು ಸೆಸ್ಕ್ ಇಂಜಿನಿಯರ್‌ಗಳನ್ನು ಪ್ರಶ್ನಿಸಿದರು.

ಈ ಸಂಬಂಧ ಕ್ರಮ ವಹಿಸುವಂತೆ ಚಾಮರಾಜನಗರ ಮತ್ತು ಕೊಳ್ಳೇಗಾಲ ಸೆಸ್ಕ್ ಉಪ ವಿಭಾಗಗಳ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳಿಗೆ ಸೂಚಿಸಲಾಗಿದೆ. ಬೆಳಗಿನ ಸಮಯವೂ ವಿದ್ಯುತ್ ದೀಪ ಉರಿಸುವುದನ್ನು ನಿಯಂತ್ರಿಸುವುದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಗ್ರಾಮ ಪಂಚಾಯಿತಿಗಳು ನಿರ್ವಹಣೆ ಮಾಡಬೇಕು ಎಂದು ಚಾಮರಾಜನಗರ ಸೆಸ್ಕ್ ಉಪ ವಿಭಾಗದ ಇಇ ಪೂರ್ಣಚಂದ್ರ ತೇಜಸ್ವಿ ಅವರು ಸಭೆಯ ಗಮನಕ್ಕೆ ತಂದರು.

6 ವರ್ಷವಾದರೂ ಸಂಪರ್ಕ ಸಿಕ್ಕಿಲ್ಲ: ಈ ನಡುವೆ ಮಾತನಾಡಿದ ಜಿಪಂ ಸದಸ್ಯೆ ಮರುಗದಮಣಿ ಅವರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಆಯ್ಕೆಯಾದ ಫಲಾನುಭವಿ ರಾಮಾಪುರದ ರಾಜಮ್ಮ ಅವರ ಜಮೀನಿನಲ್ಲಿ ಬೋರ್‌ವೆಲ್ ಕೊರೆದು 6 ವರ್ಷಗಳಾಗಿವೆ. ಇನ್ನು ವಿದ್ಯುತ್ ಸಂಪರ್ಕ ನೀಡಿಲ್ಲ ಎಂದು ದೂರಿದರು.

ಬರಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬೆಳ್ಳಯ್ಯ, ಗುರುನಾಥಯ್ಯ, ಚಿಕ್ಕನಾಯಕಯ್ಯ ಅವರು ಸಹ ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಾಗಿದ್ದು, ಇವರ ಜಮೀನುಗಳಲ್ಲಿ ಬೋರ್‌ವೆಲ್ ಕೊರೆಯಲಾಗಿದೆ. ಇನ್ನು ವಿದ್ಯುತ್ ಸಂಪರ್ಕ ದೊರೆತಿಲ್ಲ ಎಂದು ಜಿಪಂ ಸದಸ್ಯ ಚೆನ್ನಪ್ಪ ಸಭೆಗೆ ತಿಳಿಸಿದರು. ಇಲ್ಲಿಂದ ಸುದೀಘ ಚರ್ಚೆ ನಡೆಯಿತು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 2016-17 ಮತ್ತು 2017-18ನೇ ಸಾಲಿನಲ್ಲಿ 272 ಬೋರ್‌ವೆಲ್ ಕೊರೆಯುವ ಗುರಿ ನಿಗದಿ ಮಾಡಲಾಗಿತ್ತು. 205 ಕೊಳವೆ ಬಾವಿ ಕೊರೆಯಲಾಗಿದೆ. 67 ಕೊರೆಯಲು ಬಾಕಿಯಿವೆ. 68ಕ್ಕೆ ವಿದ್ಯುತ್ ಸಂಪರ್ಕ ನೀಡಿಲ್ಲ ಎಂದು ನಿಗಮದ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಪ್ಪ ವಿವರಿಸಿದರು.

ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ 2016-17 ಮತ್ತು 2017-18ನೇ ಸಾಲಿನಲ್ಲಿ 280 ಬೋರ್‌ವೆಲ್ ಕೊರೆಯುವ ಗುರಿ ನಿಗದಿ ಮಾಡಲಾಗಿತ್ತು. 216 ಕೊಳವೆ ಬಾವಿ ಕೊರೆಯಲಾಗಿದೆ. 61 ಕೊರೆಯಲು ಬಾಕಿಯಿವೆ. 199 ಕ್ಕೆ ವಿದ್ಯುತ್ ಸಂಪರ್ಕ ನೀಡಿಲ್ಲ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಪ್ರಸಾದ್ ತಿಳಿಸಿದರು.

ಬೋರ್‌ವೆಲ್ ಕೊರೆದ ನಂತರ ನಾವು ವಿದ್ಯುತ್ ಸಂಪರ್ಕ ನೀಡುವಂತೆ ಕೋರಿ ಸೆಸ್ಕ್‌ಗೆ ಆನ್‌ಲೈನ್ ಮೂಲಕ ಅಗತ್ಯ ಠೇವಣಿ ಪಾವತಿಸಿ ಫಲಾನುಭವಿ ವಿಳಾಸವನ್ನು ನೋಂದಣಿ ಮಾಡಿಸುತ್ತೇವೆ. ಆದರೆ, ಸಂಪರ್ಕ ನೀಡುವುದು ಮಾತ್ರ ತೀವ್ರ ವಿಳಂಬವಾಗುತ್ತಿದೆ ಎಂದು ಅಭಿವೃದ್ಧಿ ನಿಗಮಗಳ ವ್ಯವಸ್ಥಾಪಕರು ದೂರಿದರೆ, ಸೆಸ್ಕ್‌ನವರು ಸಂಪರ್ಕ ನೀಡುವ ಹೊತ್ತಿಗೆ ಬೋರ್‌ವೆಲ್‌ಗಳಲ್ಲಿ ನೀರು ಬತ್ತಿ ಹೋಗಿರುವ ಬಗ್ಗೆ ದೂರುಗಳು ಕೇಳಿಬಂದಿವೆ ಎಂದು ಜಿಪಂ ಸಿಇಒ ಡಾ.ಕೆ.ಹರೀಶಕುಮಾರ್ ಹಾಗೂ ಜಿಪಂ ಸದಸ್ಯರು ಆರೋಪಿಸಿದರು.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...