More

    ವಿದ್ಯೆ ಕಲಿತು ಬುದ್ಧಿವಂತರಾಗಬೇಕು

    ಚಾಮರಾಜನಗರ: ಮಕ್ಕಳಿಗೆ ಶಿಕ್ಷಣ ಹಾಗೂ ಬುದ್ಧಿವಂತಿಕೆ ಮುಖ್ಯವಾಗಿದ್ದು, ಇವೆರಡು ಮಕ್ಕಳನ್ನ ಭವಿಷ್ಯದಲ್ಲಿ ಉನ್ನತ ಮಟ್ಟಕ್ಕೆ ಕರೆದುಕೊಂಡು ಹೋಗಲಿವೆ ಎಂದು ಜಿಲ್ಲಾಕಾರಿ ಡಿ.ಎಸ್. ರಮೇಶ್
    ಅಭಿಪ್ರಾಯಪಟ್ಟರು.


    ನಗರದ ಪಿಡಬ್ಲ್ಯೂಡಿ ಕಾಲನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರ, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಮತ್ತು ಶ್ರೀವರಮಹಾಲಕ್ಷೀ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆಯ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಕಾನೂನು ಅರಿವು ಹಾಗೂ ಉಚಿತ ಆಲರಂ ಗಡಿಯಾರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ವಿದ್ಯಾರ್ಥಿಗಳು ಶ್ರಮವಹಿಸಿ ಅಧ್ಯಯನ ಮಾಡಬೇಕು. ವಿದ್ಯೆ ಕಲಿತು ಬುದ್ಧಿವಂತರಾಗಬೇಕು. ಕಷ್ಟಕಾಲದಲ್ಲಿ ಮತ್ತೊಬ್ಬರಿಗೆ ನೆರವಾಗುವ ಗುಣವನ್ನು ಬೆಳೆಸಿಕೊಳ್ಳಬೇಕು. ಉತ್ತಮ ಶಿಕ್ಷಣ ಪಡೆಯುವುದರಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು.


    ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾೀಶ ಎಂ.ಶ್ರೀಧರ ಮಾತನಾಡಿ, ವಿದ್ಯಾರ್ಥಿಯ ಜೀವನದಲ್ಲಿ ಸಮಯ ಪರಿಪಾಲನೆಯು ತುಂಬಾ ಮುಖ್ಯ. ಸಮಯವನ್ನು ಸದುಪಯೋಗ ಮಾಡಿಕೊಂಡರೆ ಭವಿಷ್ಯದಲ್ಲಿ ಉನ್ನತ ಸ್ಥಾನವನ್ನ ತಲುಪಿ ದೇಶದ ಪ್ರಗತಿಯಲ್ಲಿ ಭಾಗಿಯಾಗಬಹುದು ಎಂದರು. ವಿದ್ಯಾರ್ಥಿಗಳು ಸಾಧನೆಯಲ್ಲಿ ಹೆಮ್ಮರವಾಗಿ ಬೆಳೆದು ಸಡೃಢ ದೇಶವನ್ನ ನಿರ್ಮಿಸಬೇಕು. ಸರಳತೆ, ಸತ್ಯ, ಪ್ರಾಮಾಣಿಕತೆ, ಮನುಷ್ಯತ್ವಗಳನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಯಾಗಬೇಕು. ಶಾಲೆ ಬಿಟ್ಟು ಬಾಲ್ಯದಲ್ಲಿಯೇ ದುಡಿಮೆಗೆ ತೊಡಗಬಾರದು. ಕಾನೂನು ನಿಮ್ಮೊಂದಿಗೆ ಇರುತ್ತದೆ. ಎಲ್ಲ ಸಮಸ್ಯೆಗಳಿಗೆ ಪರಿಹಾರ ಇದೆ ಎಂದರು.


    ಹೆಚ್ಚುವರಿ ಜಿಲ್ಲಾಕಾರಿ ಎಸ್. ಕಾತ್ಯಾಯಿನಿದೇವಿ, ಬಸವರಾಜೇಂದ್ರ ಟ್ರಸ್ಟ್ ನ ಡಾ. ಶ್ವೇತ, ನಾಗೇಂದ್ರಸ್ವಾಮಿ, ರಾಜ ಮೆಡಿಕಲ್‌ನ ಎ. ಮಂಜುನಾಥ್, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಗೌರವ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಶ್ರೀವರಮಹಾಲಕ್ಷೀ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆಯ ಅಧ್ಯಕ್ಷ ಜಿ. ಬಂಗಾರು, ಎಸ್.ಡಿ.ಎಂ.ಸಿ.ಯ ಉಮಾ, ಮುಖ್ಯ ಶಿಕ್ಷಕಿ ಮಾಲಿನಿ, ಶಿಕ್ಷಕ ಜೋಸೆಫ್ ಮತ್ತು ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts