22.5 C
Bengaluru
Sunday, January 19, 2020

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

Latest News

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ರಸ್ತೆ ಸಂಚಾರ ತಡೆ ನಡೆಸಿ ಪ್ರತಿಭಟಿಸಿದರು. ಇದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆಯ ಕೆರೆಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿ ಪೂರ್ಣಗೊಂಡಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಲ್ಲಿನ ಶಾಸಕರ ನಡುವಿನ ವೈಮನಸ್ಸಿನಿಂದಾಗಿ ವಿಳಂಬ ಮಾಡಲಾಗಿದೆ. ಇವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ತೀವ್ರ ಬರಗಾಲದಿಂದಾಗಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಮುಂದಿನ ಒಂದು ವಾರದೊಳಗೆ ಹುತ್ತೂರು ಕೆರೆಯಿಂದ ವಡ್ಡಗೆರೆ ಕೆರೆಗೆ ನೀರು ತುಂಬಿಸಲು ಚಾಲನೆ ನೀಡದಿದ್ದರೆ ರೈತರೇ ಚಾಲನೆ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.

15 ದಿನದೊಳಗೆ ಸಭೆ ಕರೆಯಿರಿ: ರಾಜ್ಯದಲ್ಲಿ ಸರ್ಕಾರ ರಚನೆಯಾಗಿ ಒಂದು ವರ್ಷ ಕಳೆದಿದ್ದರೂ ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರು, ರೈತರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿಲ್ಲ. ಇದರಿಂದ ಹಲವು ಇಲಾಖೆಗಳ ಅಧಿಕಾರಿಗಳು ಬೇಜವಾಬ್ದಾರಿತನದಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ರೈತರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಮುಂದಿನ 15 ದಿನದೊಳಗೆ ಸಭೆ ಕರೆಯಬೇಕು ಎಂದು ಆಗ್ರಹಿಸಿದರು.

ಅಲ್ಲದೆ ಕಟ್ನವಾಡಿ, ಹಿರಿಕಾಟಿ ಹಾಗೂ ಹೆಗ್ಗೋಠಾರ ಗ್ರಾಮಗಳ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಪರವಾನಗಿ ಪಡೆದಿರುವ ಭೂಮಿಯ ಜತೆ ಹೆಚ್ಚಿನ ಭೂಮಿಯನ್ನು ಸೇರಿಸಿಕೊಂಡು ಗಣಿಗಾರಿಕೆ ಮಾಡಲಾಗುತ್ತಿದೆ. ಆದರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಯಾವುದೇ ಕ್ರಮವಹಿಸದೆ ನಿರ್ಲಕ್ಷೃ ಮಾಡಿದ್ದಾರೆ. ಅಲ್ಲದೆ ಸೆಸ್ಕ್ ಇಲಾಖೆಯ ಅಧಿಕಾರಿಗಳು ರೈತರಿಗೆ ಸೂಕ್ತ ಸಮಯಕ್ಕೆ ಟ್ರಾನ್ಸ್ ಫಾರ್ಮರ್ ಕೊಡದೆ ವಿಳಂಬ ಮಾಡುತ್ತಿದ್ದಾರೆ. ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ ಎಂದರು.

ಬೂದಂಬಳ್ಳಿಮೋಳೆ ಗ್ರಾಮದಲ್ಲಿರುವ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮವಹಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಸ್ಥಳಕ್ಕಾಗಮಿಸಿದ ಉಪವಿಭಾಗಾಧಿಕಾರಿ ನಿಖಿತಾ ಚಿನ್ನಸ್ವಾಮಿ ಅವರು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಮಾತನಾಡಿ, ಈ ಎಲ್ಲ ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಗಮನಕ್ಕೆ ತರಲಾಗುವುದು. ಮುಂದಿನ ಒಂದು ವಾರದೊಳಗೆ ವಡ್ಡಗೆರೆ ಕೆರೆಗೆ ನೀರು ಬಿಡಲು ಕ್ರಮವಹಿಸಲಾಗುವುದು. ಅಲ್ಲದೆ 20 ದಿನದೊಳಗೆ ಅಧಿಕಾರಿಗಳ ಸಭೆ ಕರೆಯುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು. ನಂತರ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು.
ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಡಾ.ಗುರುಪ್ರಸಾದ್, ಕಾರ್ಯಾಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ, ಖಜಾಂಚಿ ಅಂಬಳೆ ಶಿವಕುಮಾರ್, ಕಂದೇಗಾಲ ಮಹೇಶ್, ಪೃಥ್ವಿ, ಮಾದಶೆಟ್ಟಿ, ಪುಟ್ಟರಾಜು, ವಿಜಯ್, ಮಂಜು, ಮಹೇಶ, ಅಶೋಕ್, ಗುರು ಇತರರಿದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...