More

    ಜಿಲ್ಲೆಯಾದ್ಯಂತ ವಿಶ್ವ ಪರಿಸರ ದಿನಾಚರಣೆ

    ವಿವಿಧ ಸಂಘಸಂಸ್ಥೆಗಳು ಭಾಗಿ, ಗಿಡ ನೆಟ್ಟು ಪರಿಸರ ಕಾಳಜಿ ಮೆರೆದ ಜನ

    ಚಾಮರಾಜನಗರ: ಭಾಗಶಃ ಸಮೃದ್ಧ ಅರಣ್ಯ ಪ್ರದೇಶ ಹೊಂದಿರುವ ಹಾಗೂ ಕರೊನಾ ಮುಕ್ತ ಜಿಲ್ಲೆಯಾಗಿ ಕಂಗೊಳಿಸುತ್ತಿರುವ ಚಾಮರಾಜನಗರ ಜಿಲ್ಲೆಯಾದ್ಯಂತ ವಿಶ್ವ ಪರಿಸರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
    ನಗರದ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ ಮತ್ತು ಜಿಲ್ಲಾ ವಕೀಲರ ಸಂಘದ ಸಹಯೋಗದೊಂದಿಗೆ ಶುಕ್ರವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
    ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ವಿ.ಪಾಟೀಲ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಮಾನವರು ಪರಿಸರ ಮಾಲಿನ್ಯ ಉಂಟು ಮಾಡುತ್ತಿದ್ದು, ಇದರಿಂದ ಓಜೋನ್ ಪದರವು ನಶಿಸುತ್ತಾ ಬಂದಿದೆ. ಇದರಿಂದ ಸೂರ್ಯನ ನೇರ ಕಿರಣವು ಮಾನವನ ಮೇಲೆ ಬೀಳುವ ಸಾಧ್ಯತೆಗಳು ಉಂಟಾಗುತ್ತಿದ್ದು, ಅದನ್ನು ತಡೆಗಟ್ಟುವ ಸಲುವಾಗಿ ಪ್ರತಿಯೊಬ್ಬರೂ ಗಿಡ ನೆಟ್ಟು ಅದನ್ನು ಪೋಷಣೆ ಮಾಡಬೇಕು ಎಂಬ ಉದ್ದೇಶದಿಂದ ವಿಶ್ವ ಪರಿಸರ ದಿನವನ್ನು ಆಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
    ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ಎಂ.ರಮೇಶ್, ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಸಿ.ಜಿ.ವಿಶಾಲಾಕ್ಷಿ, ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ಪ್ರಥಮ ನ್ಯಾಯಿಕ ದಂಡಾಧಿಕಾರಿ ಮಹಮ್ಮದ್ ರೋಷನ್ ಷಾ, ಅಪರ ಸಿವಿಲ್ ನ್ಯಾಯಾಧೀಶರಾದ ಸ್ಮಿತಾ, ವಲಯ ಅರಣ್ಯಾಧಿಕಾರಿ ಟಿ.ಆರ್.ಅಮೃತಾ, ಉಪವಲಯ ಅರಣ್ಯಾಧಿಕಾರಿ ಎಂ.ರವಿ, ಪರಿಸರ ಅಧಿಕಾರಿ ಎಂ.ಬಿ.ರಘುರಾಮ್, ಜಿಲ್ಲಾ ವಕೀಲ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ಎಸ್.ಮಂಜು ಹರವೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts