More

    ಎಲ್ಲೆಡೆ ಅಂಬೇಡ್ಕರ್ ಸ್ಮರಣೆ

    ಚಾಮರಾಜನಗರ: ಜಿಲ್ಲಾದ್ಯಂತ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ಸ್ಮರಣೆ ಮಾಡಲಾಯಿತು.


    ಚಾಮರಾಜನಗರದಲ್ಲಿ ಗುಂಡ್ಲುಪೇಟೆ, ಯಳಂದೂರು, ಕೊಳ್ಳೇಗಾಲ, ಹನೂರು ತಾಲೂಕುಗಳಲ್ಲಿ ಅಂಬೇಡ್ಕರ್ ಪುತ್ಥಳಿ, ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಿವಿಧ ಸಂಘ- ಸಂಸ್ಥೆಗಳು ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್ ಅವರ ಸಾಧನೆಗಳನ್ನು ಗಣ್ಯರು ಬಣ್ಣಿಸಿದರು. ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಆಶಯ ವ್ಯಕ್ತಪಡಿಸಿದರು.


    ದುರ್ಬಲ ಪ್ರಾಣಿಗಳು ಬಲಿಯಾಗುತ್ತವೆ. ಬಲಿಷ್ಠರು ಎಂದಿಗೂ ಬಲಿಪ್ರಾಣಿಯಾಗುವುದಿಲ್ಲ. ಸಮಾಜದಲ್ಲಿ ನಾವೆಲ್ಲರೂ ಬಲಿಷ್ಠರಾಗಿ ಬಾಳಬೇಕು. ನಮ್ಮೊಳಗಿನ ಶಕ್ತಿ ನಾವೇ ಆಗಿರಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ತಿಳಿಸಿದರು.
    ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 66ನೇ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.


    ಜೀವನದ ಜಂಜಾಟಗಳ ನಡುವೆ ಮಹನೀಯರ ಸ್ಮರಣೆಯನ್ನು ನಾವು ಮರೆತುಬಿಡಬಾರದು. ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಧನೆ, ಸಮಾಜಕ್ಕೆ ನೀಡಿದ ಕೊಡುಗೆ, ಧ್ಯೇಯೋದ್ದೇಶಗಳನ್ನು ಸ್ಮರಿಸಬೇಕು. ಉದಾತ್ತ ಚಿಂತನೆ, ಆಲೋಚನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮಕ್ಕೂ ಮುನ್ನಾ ಜಿಲ್ಲಾಡಳಿತ ಭವನದ ಮುಂಭಾಗ ಇರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿದರು. ಜಿಪಂ ಸಿಇಒ ಗಾಯತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್‌ರಾಜ್, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಮತ್ತು ದಲಿತ ಮುಖಂಡರು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts