20.4 C
Bangalore
Monday, December 9, 2019

ಎಲ್ಲರೂ ಜನನ-ಮರಣ ಪ್ರಮಾಣಪತ್ರ ಪಡೆದುಕೊಳ್ಳಿ

Latest News

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

ಮೊದಲ ಹಂತದ ಮತ ಎಣಿಕೆ ಶಿವರಾಮ ಹೆಬ್ಬಾರಗೆ 5004 ಮತ ಮುನ್ನಡೆ

ಕಾರವಾರ: ಕುತೂಹಲ ಕೆರಳಿಸಿರುವ ವಿಧಾನಸಭೆಯ 15 ಕ್ಷೇತ್ರಗಳ ಉಪಚುನಾವಣೆಯ ಪೈಕಿ ಯಲ್ಲಾಪುರ ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ. ಮೊದಲ ಹಂತದ ಮತ ಎಣಿಕೆಯಲ್ಲಿ...

ಚಾಮರಾಜನಗರ: ಜನನ-ಮರಣ ನೋಂದಣಿ ಮಾಡಿಸುವ ಮೂಲಕ ಜನನ-ಮರಣ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ ತಿಳಿಸಿದರು.

ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಸಾಧನ ಸಂಸ್ಥೆ ಸಹಯೋಗದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳಿಗಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜನನ-ಮರಣ ನೋಂದಣಿ ಕಾಯ್ದೆ ಜಾರಿಗೆ ಬಂದಿದ್ದು, ಪ್ರಸ್ತುತ ಜನನ-ಮರಣ ಪ್ರಮಾಣ ಪತ್ರ ಅತ್ಯವಶ್ಯಕವಾಗಿದೆ. ಜನಿಸಿದ ಅಥವಾ ಮರಣ ಹೊಂದಿದ 21 ದಿನದೊಳಗೆ ಜನನ-ಮರಣ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಬೇಕು. ಒಂದು ವೇಳೆ ಈ ಸಮಯ ಮೀರಿದರೆ 30 ದಿನಗಳವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಇದು ಆಗದಿದ್ದರೆ 2 ವರ್ಷಗಳವರೆಗೆ ಅವಕಾಶವುಂಟು. 2 ವರ್ಷ ಕಳೆದ ನಂತರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬೇಕಾಗುತ್ತದೆ ಎಂದರು.

ಶಾಲೆಗೆ ಸೇರಿಸಲು, ಉದ್ಯೋಗಕ್ಕೆ ಸೇರಲು ಹಾಗೂ ಫೋಕ್ಸೋ ಕಾಯ್ದೆಯಡಿ ಸಿಲುಕಿದ ಸಂದರ್ಭದಲ್ಲಿ ಜನನ ಪ್ರಮಾಣ ಪತ್ರದ ಅಗತ್ಯವಿದೆ. ಮರಣ ಪ್ರಮಾಣ ಪತ್ರವು ಬ್ಯಾಂಕ್, ಎಲ್‌ಐಸಿಗಳಲ್ಲಿ ಇಟ್ಟಿರುವ ಹಣ ತೆಗೆದುಕೊಳ್ಳಲು, ಖಾತೆ ವರ್ಗಾವಣೆ ಸೇರಿ ಇತರೆ ಕಾರ್ಯಗಳಿಗೆ ಬೇಕಾಗಿರುತ್ತದೆ ಎಂದು ತಿಳಿಸಿದರು.

ಹಕ್ಕುಗಳ ಉಲ್ಲಂಘನೆಯಾದಾಗ ಅದನ್ನು ರಕ್ಷಣೆ ಮಾಡಿಕೊಳ್ಳಲು ಕಾನೂನಿನ ತಿಳಿವಳಿಕೆ ಅಗತ್ಯವಿರುತ್ತದೆ. ವಿದ್ಯಾರ್ಥಿಗಳು 18 ವರ್ಷ ತುಂಬದೆ ಹಾಗೂ ಚಾಲನಾ ಪರವಾನಗಿ ಪಡೆಯದೆ ವಾಹನ ಚಲಾಯಿಸಬಾರದು. ಜತೆಗೆ ಕಾನೂನಿನ ಕುರಿತು ತಮ್ಮ ಸುತ್ತಮುತ್ತಲಿನವರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತನಾಡಿ, ದೇಶದ ಕಾನೂನು ಸಂವಿಧಾನದಡಿ ರಚನೆಯಾಗಿದೆ. ದೇಶದಲ್ಲಿ 3500ಕ್ಕೂ ಹೆಚ್ಚು ಕಾನೂನುಗಳಿದ್ದು, ಎಲ್ಲರೂ ಎಲ್ಲ ಕಾನೂನುಗಳನ್ನು ತಿಳಿಯಲು ಸಾಧ್ಯವಿಲ್ಲ. ಸಮಾಜದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸಲು ಅವಶ್ಯಕ ಕಾನೂನುಗಳನ್ನು ತಿಳಿಯಬೇಕು. ವಿದ್ಯಾರ್ಥಿದೆಸೆಯಿಂದಲೇ ಕಾನೂನಿನ ಅರಿವು ಪಡೆಯುವುದು ಅಗತ್ಯ ಎಂದು ತಿಳಿಸಿದರು.

ಪಟ್ಟಣ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಎನ್.ಸಿ. ನಾಗೇಗೌಡ ಮಾತನಾಡಿ, ಮಕ್ಕಳು ಮಾಡಿದ ಅಪರಾಧಗಳಿಂದ ತಂದೆ ತಾಯಿಗಳು ಶಿಕ್ಷೆ ಅನುಭವಿಸಬೇಕಾಗುತ್ತದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಅಪರಾಧಗಳಿಂದ ದೂರ ಇರಬೇಕು. ಮಕ್ಕಳ ಕಳ್ಳ ಸಾಗಣೆ ಕುರಿತು ದೂರುಗಳು ಬರುತ್ತಿದ್ದು, ಮಕ್ಕಳು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.

ಪ್ರಾಂಶುಪಾಲ ಸೋಮಣ್ಣ, ಉಪಪ್ರಾಂಶುಪಾಲ ರಾಚಯ್ಯ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಅರುಣ್ ಕುಮಾರ್, ಜಿಲ್ಲಾ ಬಾಲ ನ್ಯಾಯ ಮಂಡಳಿ ಸದಸ್ಯ ಟಿ.ಜೆ. ಸುರೇಶ್, ಮುಖ್ಯ ಶಿಕ್ಷಕ ನಿಂಗೇಗೌಡ ಇತರರಿದ್ದರು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...