More

    ಕಾಂಗ್ರೆಸ್ ಕಚೇರಿಯಲ್ಲಿ ಶ್ರೀಭಗೀರಥ ಜಯಂತಿ

    ಚಾಮರಾಜನಗರ : ತಮ್ಮ ಪೂರ್ವಜರಿಗಾಗಿ ಭುವಿಗೆ ಗಂಗೆಯನ್ನು ತಂದ ಭಗೀರಥ ಮಹರ್ಷಿ ಆದರ್ಶಗಳು ಎಲ್ಲರಿಗೂ ದಾರಿದೀಪವಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

    ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಶ್ರೀಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸೂರ್ಯವಂಶದ ರಾಜನಾದ ಭಗೀರಥ ಮಹಾರಾಜ ತನ್ನ ಜನರಿಗಾಗಿ ಶಿವನ ಕುರಿತು ತಪಸ್ಸು ಮಾಡಿ ಗಂಗೆಯನ್ನು ಧರೆಗೆ ತಂದ ಮಹಾ ಪುರುಷ. ಅವರ ತತ್ವ ಸಿದ್ಧಾಂತಗಳು ಇಂದಿಗೂ ಸಹ ಪ್ರಸ್ತುತವಾಗಿವೆ. ಶ್ರೀಭಗೀರಥ ಮಹಾರಾಜ ಶಿವನ ಕುರಿತು ಛಲ ಬಿಡದೇ ತಪಸ್ಸು ಮಾಡಿ ಧರೆಗೆ ನೀರು ತರುವ ಮೂಲಕ ಅದರ್ಶವಾಗಿದ್ದಾರೆ. ಅವರ ತತ್ವ ಅದರ್ಶವನ್ನು ನಾವೆಲ್ಲರು ಮೈಗೂಡಿಸಿಕೊಳ್ಳೋಣ ಎಂದರು.

    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಭಗೀರಥ ಮಹರ್ಷಿಗಳ ತಪೋ ಶಕ್ತಿಗೆ ಶಿವನೇ ಪ್ರತ್ಯಕ್ಷವಾಗಿ, ಧರೆಗೆ ಗಂಗೆಯನ್ನು ಇಳಿಸಿದರು ಎಂಬ ಸತ್ಯ ಘಟನೆಯನ್ನು ನಾವೆಲ್ಲರು ಅರಿತುಕೊಳ್ಳಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಬ್ಲಾಕ್ ಅಧ್ಯಕ್ಷರಾದ ಮಹಮದ್ ಅಸ್ಗರ್, ಕಾರ್ಯದರ್ಶಿ ಕಾಗಲವಾಡಿ ಚಂದ್ರು, ಮುಖಂಡರಾದ ಶಿವಮೂರ್ತಿ, ಜಿ.ಪಂ. ಮಾಜಿ ಸದಸ್ಯ ಸೋಮನಾಯಕ, ತಾ.ಪಂ.ಮಾಜಿ ಸದಸ್ಯ ಎಂ.ಮಹದೇವಶೆಟ್ಟಿ, ಸೈಯದ್ ರಫಿ, ಎಪಿಎಂಸಿ ಅಧ್ಯಕ್ಷ ಸೋಮೇಶ್, ಮಾಜಿ ಅಧ್ಯಕ್ಷ ಡಿ. ನಾಗೇಂದ್ರ, ನಿರ್ದೇಶಕ ಅಲೂರು ಪ್ರದೀಪ್, ಉಮೇಶ್, ಅರುಣ್‌ಕುಮಾರ್, ಗೌಡಹಳ್ಳಿ ರಾಜೇಶ್, ಪುಟ್ಟಸ್ವಾಮಿ, ಸ್ವಾಮಿ, ರವಿಗೌಡ, ಮೋಹನ್ ನಗು, ಅಕ್ಷಯ್, ನಗರಸಭಾ ಸದಸ್ಯೆ ಚಿನ್ನಮ್ಮ, ಜಿ.ಪಂ.ಮಾಜಿ ಸದಸ್ಯ ಕಾವೇರಿ ಶಿವಕುಮಾರ್, ಸೇವಾದಳದ ಅಧ್ಯಕ್ಷ ಹೊಂಗನೂರು ಜಯರಾಜ್ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts