18.1 C
Bangalore
Saturday, December 7, 2019

ಅಪರಾಧ ಕೃತ್ಯಗಳಿಗೆ ಮಹಿಳೆಯರು, ಮಕ್ಕಳ ಬಳಕೆ

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ಚಾಮರಾಜನಗರ: ಮಹಿಳೆ ಮತ್ತು ಮಕ್ಕಳನ್ನು ಕಳ್ಳ ಸಾಗಣೆ ಮಾಡಿ ಸಮಾಜದಲ್ಲಿ ಅಪರಾಧ ಕೃತ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ.ವಿಶಾಲಾಕ್ಷಿ ಬೇಸರ ವ್ಯಕ್ತಪಡಿಸಿದರು.

ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಮಹಿಳೆಯರು, ಮಕ್ಕಳ ಕಳ್ಳ ಸಾಗಾಣಿಕೆ ತಡೆ, ವಾಣಿಜ್ಯ ಲೈಂಗಿಕ ಶೋಷಣೆಯ ಯೋಜನೆ-2015ರ ಕುರಿತು ವಿದ್ಯಾರ್ಥಿಗಳಿಗಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಹೊಸ ಅಪರಾಧಗಳು ತಲೆದೋರುತ್ತಿವೆ. ಮಹಿಳೆಯರು ದಿನೇ ದಿನೆ ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ. ಮಹಿಳೆಯರು, ಮಕ್ಕಳನ್ನು ಕಳ್ಳ ಸಾಗಾಣಿಕೆ ಮಾಡಿ ಅವರಿಂದ ಅಪರಾಧ ಕೃತ್ಯಗಳು, ಮನೆಗೆಲಸ, ವೇಶ್ಯಾವಾಟಿಕೆಯಂತಹ ಕೆಲಸಗಳಿಗೆ ಬಳಸಿಕೊಳ್ಳಲಾಗುತ್ತಿದ್ದು, ಇದರ ಹಿಂದೆ ದೊಡ್ಡ ಮಾಫಿಯಾ ಇದೆ ಎಂದು ತಿಳಿಸಿದರು.

ಹೆಣ್ಣು ಮಕ್ಕಳು ಆಸೆ, ಆಮಿಷಗಳಿಗೆ ಒಳಗಾಗಬೇಡಿ, ಗುಂಪಿನಲ್ಲಿ ಸಂಚರಿಸಿ, ಮನೆಯಲ್ಲಿ ಚರ್ಚಿಸುವ ಮೂಲಕ ತಮ್ಮ ರಕ್ಷಣೆಗೆ ಮುಂದಾಗಬೇಕು. ಹೆಣ್ಣು ಮಕ್ಕಳ ಮೇಲೆ ಶೋಷಣೆ ನಡೆದರೆ ಕೂಡಲೆ ಸಂಬಂಧಪಟ್ಟ ಶಾಲಾ ಮುಖ್ಯಸ್ಥರು, ಪೊಲೀಸರಿಗೆ ತಿಳಿಸಬೇಕು. ವಿದ್ಯಾರ್ಥಿ ದಿಸೆಯಲ್ಲಿಯೇ ಕಾನೂನು ಅರಿವು ಮೂಡಿಸಿದರೆ ಶೋಷಣೆ ವಿರುದ್ಧ ಸನ್ನದ್ಧರಾಗಿ ಹೋರಾಟ ಮಾಡಲು ಸಹಾಯವಾಗುತ್ತದೆ ಎಂದರು.

ವಕೀಲ ಶಿವಸ್ವಾಮಿ ಮಾತನಾಡಿ, ಮಹಿಳೆಯರು, ಮಕ್ಕಳ ಮೇಲೆ ದಿನೇ ದಿನೆ ಶೋಷಣೆಗಳು ನಡೆಯುತ್ತಿದ್ದು, 2015ರಲ್ಲಿ ದೇಶದಲ್ಲಿ 6,877 ಪ್ರಕರಣಗಳು ಕಂಡು ಬಂದಿವೆ. ಕೆಲಸ ಹುಡುಕಾಟ, ಜೀವನ ನಿರ್ವಹಣೆ, ಐಷಾರಾಮಿ ಜೀವನ ನಡೆಸಲು ಬಯಸುವ ಮಹಿಳೆಯರು ಇಂತಹ ಕೃತ್ಯಗಳಿಗೆ ಒಳಗಾಗುತ್ತಿದ್ದು, ಇದರಿಂದ ಅವರ ವೈಯಕ್ತಿಕ ಜೀವನ ನಾಶವಾಗುತ್ತದೆ ಎಂದು ತಿಳಿಸಿದರು.

ಭಿಕ್ಷಾಟನೆ, ಲೈಂಗಿಕ ಶೋಷಣೆ ಹಾಗೂ ಬಲವಂತದ ಕೆಲಸದ ಮೂಲಕ ಇಡೀ ವಿಶ್ವದಲ್ಲಿ ಪ್ರತಿ ದಿನ 2 ರಿಂದ 4 ಮಿಲಿಯನ್ ಡಾಲರ್ ಆದಾಯ ಬರುತ್ತಿರುವ ಕುರಿತು ವರದಿಯಾಗಿದೆ. 5 ರಿಂದ 30 ವರ್ಷದೊಳಗಿನ ಹೆಣ್ಣು ಮಕ್ಕಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಶೋಷಣೆಗೊಳಗಾದವರಿಗೆ ಕೇಂದ್ರ ಸರ್ಕಾರ ಮಾಸಿಕ 10 ಸಾವಿರ ರೂ. ನೀಡುತ್ತದೆ. ಜತೆಗೆ ಸಾಂತ್ವನ ಕೇಂದ್ರಗಳಲ್ಲಿ ಇವರಿಗೆ ಆಶ್ರಯ ನೀಡಲಾಗುತ್ತದೆ ಎಂದರು.

ಮಹಿಳೆಯರನ್ನು ಶೋಷಣೆ ಮಾಡುವ ವ್ಯಕ್ತಿಗೆ 12 ವರ್ಷ ಶಿಕ್ಷಿಸುವ ಕಾಯ್ದೆ ಜಾರಿಗೆ ಬಂದಿದೆ. ಜತೆಗೆ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಸಿದವರಿಗೆ 20 ವರ್ಷ ಶಿಕ್ಷೆ ಹಾಗೂ ಮರಣದಂಡನೆಯಂತಹ ಶಿಕ್ಷೆ ವಿಧಿಸುವ ಅವಕಾಶವೂ ಇದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಎ.ಜಿ.ಶಿವಕುಮಾರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್, ಬಾಲ ನ್ಯಾಯ ಮಂಡಳಿ ಸದಸ್ಯ ಟಿ.ಜೆ.ಸುರೇಶ್ ಇತರರಿದ್ದರು.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...