More

    ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ

    ಚಾಮರಾಜನಗರ: ನ್ಯಾಯಸಮ್ಮತ, ಮುಕ್ತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದ್ದು, ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಲೋಕಸಭಾ ಸಾರ್ವತ್ರಿಕ ಚುನಾವಣಾ ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.

    ಚುನಾವಣಾ ಆಯೋಗ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದೆ. ಚುನಾವಣೆ ಪ್ರಕ್ರಿಯೆಯು ಮುಕ್ತಾಯಗೊಳ್ಳುವ ಜೂ.6ರ ವರೆಗೂ ಸದಾಚಾರ ಸಂಹಿತೆ ಜಾರಿಯಲ್ಲಿರುತ್ತದೆ. ರಾಜಕೀಯ ಪಕ್ಷಗಳು ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ನೀತಿ ಸಂಹಿತೆ ಪಾಲನೆ ಸಂಬಂಧ ನಿಗಾ ವಹಿಸಲು ವಿವಿಧ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

    ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಯಾವುದೇ ತರಹದ ಧ್ವನಿವರ್ಧಕಗಳನ್ನು ಚುನಾವಣಾ ಪ್ರಚಾರಕ್ಕಾಗಿ ಬಳಸುವಂತಿಲ್ಲ. ರಾಜಕೀಯ ಪಕ್ಷಗಳು, ಸ್ಪರ್ಧಿಸುವ ಅಭ್ಯರ್ಥಿಗಳು ಸಭೆ, ಸಮಾರಂಭ ನಡೆಸಲು ಮತ್ತು ಚುನಾವಣಾ ಪ್ರಚಾರಕ್ಕಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಕನಿಷ್ಠ ಮೂರು ದಿನಗಳ ಮೊದಲು ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

    ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ನಸ್ರುಲ್ಲಾ ಖಾನ್, ನಾಗಯ್ಯ, ವೃಷಭೇಂದ್ರಪ್ಪ, ಮಹದೇವಪ್ರಸಾದ್, ಎಸ್. ಮಹೇಶ್ ಗೌಡ, ಬ್ಯಾಡಮೂಡ್ಲು ಬಸವಣ್ಣ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts