More

    ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಕಾನೂನುಕ್ರಮವಹಿಸಿ

    ಚಾಮರಾಜನಗರ: ರಾಜ್ಯದಲ್ಲೇ ಪ್ರಸಿದ್ಧ ಯಾತ್ರಾಸ್ಥಳವಾಗಿರುವ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಜಾತ್ರಾ ಸಂದರ್ಭಗಳಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡುವಂತೆ ಜಿಲ್ಲಾಡಳಿತ ಸೂಕ್ತ ಕಾನೂನು ಕ್ರಮವಹಿಸಬೇಕು ಎಂದು ಮೈಸೂರಿನ ಪರಿಸರ ವಾರಿಯರ್ಸ್ ಗ್ರೂಪ್ ಸದಸ್ಯ ಮತ್ತು ಪರಿಸರ ಪ್ರೇಮಿ ಪಿ.ಮಂಜುನಾಥ್ ಒತ್ತಾಯಿಸಿದರು.

    ಮಲೆ ಮಹದೇಶ್ವರಬೆಟ್ಟಕ್ಕೆ ಮಹಾಶಿವರಾತ್ರಿ, ಯುಗಾದಿ, ದೀಪಾವಳಿ ಹಾಗೂ ಇನ್ನಿತರೆ ವಿಶೇಷ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಅಲ್ಲದೇ ತಮಿಳುನಾಡಿನಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಭಕ್ತಾಧಿಗಳು ಪಾದಯಾತ್ರೆ ಮಾಡುವ ಸಂದರ್ಭದಲ್ಲಿ ಪ್ಲಾಸ್ಟಿಕ್ ಬಾಟಲ್‌ಗಳನ್ನು ಹೆಚ್ಚಾಗಿ ಬಳಕೆ ಮಾಡುತ್ತಿದ್ದಾರೆ. ಈ ಬಾರಿಯ ಜಾತ್ರೆಯಲ್ಲಿ ಸುಮಾರು 150 ಟ್ರಾಕ್ಟರ್‌ನಷ್ಟು ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗಿತ್ತು.ಇದರಿಂದ ಅರಣ್ಯ ಪ್ರದೇಶ ಮಾಲಿನ್ಯಕ್ಕೆ ಒಳಗಾಗುತ್ತಿದ್ದು, ವನ್ಯಜೀವಿಗಳಿಗೆ ತೊಡಕುಂಟಾಗುತ್ತಿದೆ. ಆಗಾಗಿ ಜಾತ್ರಾ ಸಂದರ್ಭದಲ್ಲಿ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಬೇಕು ಎಂದು ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

    ಮುಂದಿನ ದಿನಗಳಲ್ಲಿ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಬರುವಂತಹ ಭಕ್ತಾದಿಗಳಿಗೆ ಕಾಡಿನ ಹಾದಿಯಲ್ಲಿ 250 ಮೀಟರ್‌ಗೆ ಒಂದರಂತೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಒದಗಿಸಬೇಕು. ದಾನಿಗಳು ಭಕ್ತಾದಿಗಳಿಗೆ ನೀಡುವ ಆಹಾರ ಪದಾರ್ಥಗಳನ್ನು ಎಲೆ, ಅಡಿಕೆ ತಟ್ಟೆ, ಸ್ಟೀಲ್ ಅಥವಾ ಪೇಪರ್ ತಟ್ಟೆ, ಲೋಟಗಳಲ್ಲಿ ನೀಡಬೇಕು. ದಾನಿಗಳು ಆಹಾರ ನೀಡಲು ನೋಂದಣಿ ಮತ್ತು ಅನುಮತಿಯನ್ನು ಕಡ್ಡಾಯಗೊಳಿಸಬೇಕು. ಇದನ್ನು ಪಾಲನೆ ಮಾಡದವರ ವಿರುಧ್ಧ ಕಾನೂನು ಕ್ರಮ ಜರುಗಿಸಬೇಕು. ಜಿಲ್ಲಾಡಳಿತ ಮತ್ತು ಮಲೆಮಹದೇಶ್ವರಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಮುಂಬರುವ ದಿನಗಳಲ್ಲಿ ಇದನ್ನು ಅನುಸರಿಸಿದರೆ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಕ್ರಮವಹಿಸಿ ನಮ್ಮ ಅರಣ್ಯ ಪ್ರದೇಶ ಮತ್ತು ವನ್ಯ ಜೀವಿಗಳನ್ನು ರಕ್ಷಣೆ ಮಾಡಬೇಕಾಗಿದೆ ಎಂದು ಹೇಳಿದರು. ಗೋಷ್ಠಿಯಲ್ಲಿ ಪ್ರಜಾಪತಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸತೀಶ್‌ಕುಮಾರ್ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts