More

    ಕೋಟ್ಪಾ ದಾಳಿಯಲ್ಲಿ 2960 ರೂ. ದಂಡ ವಸೂಲಿ

    ಚಾಮರಾಜನಗರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಮಾ.20 ರಂದು ವಿವಿದೆಡೆ ದಾಳಿ ನಡೆಸಿ ಸುಮಾರು 27 ಪ್ರಕರಣಗಳಲ್ಲಿ 2960 ರೂ, ದಂಡ ವಸೂಲಿ ಮಾಡಲಾಗಿದೆ.

    ನಗರದ ಶ್ರೀಭುವನೇಶ್ವರಿ ವೃತ್ತದಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಗುಂಡ್ಲುಪೇಟೆ ವೃತ್ತದವರೆಗೆ ಬುಧವಾರ ಜಿಲ್ಲಾ ಕೋಟ್ಪಾ ತನಿಖಾ ತಂಡದ ಸಹಯೋಗದಲ್ಲಿ ದಾಳಿ ನಡೆಸಲಾಯಿತು.

    ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ನಡೆದ ದಾಳಿಯ ವೇಳೆ ನಿಯಮ ಉಲ್ಲಂಘನೆ ಮಾಡಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳು, ಕೋಟ್ಪಾ ಸೆಕ್ಷನ್-4 ಎಚ್ಚರಿಕೆ ನಾಮಫಲಕವನ್ನು ಪ್ರದರ್ಶಿಸದ ಹೋಟೆಲ್, ಬಾರ್ ಆಂಡ್ ರೆಸ್ಟೋರೆಂಟ್, ಟೀ ಸ್ಟಾಲ್‌ಗಳು, ಚಿಲ್ಲರೆ ಅಂಗಡಿಗಳು ಹಾಗೂ ಇತರೆ ಅಂಗಡಿಗಳು, ಕೋಟ್ಪಾ ಸೆಕ್ಷನ್-6(ಎ) ನಾಮಫಲಕವನ್ನು ಪ್ರದರ್ಶಿಸದ ತಂಬಾಕು ಮಾರಾಟವಿರುವ ಅಂಗಡಿಗಳು, ಶಿಕ್ಷಣ ಸಂಸ್ಥೆಯ 100 ಗಜಗಳ ಅಂತರದ ಒಳಗೆ ತಂಬಾಕು ಪದಾರ್ಥಗಳನ್ನು ಮಾರಾಟ ಮತ್ತು ಸೇವನೆಗೆ ಉತ್ತೇಜನ ನೀಡುವ ಅಂಗಡಿಗಳಿಗೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದ ವ್ಯಕ್ತಿಗಳಿಗೆ ಸ್ಥಳದಲ್ಲೇ ದಂಡ ವಿಧಿಸಲಾಯಿತು.

    ಬಳಿಕ ಕರಪತ್ರ ವಿತರಿಸಿ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳು ಮತ್ತು ತಂಬಾಕು ನಿಯಂತ್ರಣ ಕಾಯ್ದೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಾಮಚಂದ್ರರಾಜೇ ಅರಸ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಿರಿಧರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ನವೀನ್‌ಕುಮಾರ್, ಮಧುಶಂಕರ್, ದಯಾನಂದ್, ಭಾಸ್ಕರ್, ನಾರಾಯಣ್, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರ ಪ್ರಶಾಂತ್ ಹಾಗೂ ಸಮಾಜ ಕಾರ್ಯಕರ್ತ ವೀರಣ್ಣ, ಕಾರ್ಮಿಕ, ಪೊಲೀಸ್, ಕಂದಾಯ ಇಲಾಖೆ ಅಧಿಕಾರಿಗಳು ದಾಳಿಯ ವೇಳೆ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts