More

    ತಮಿಳುನಾಡು ಸರ್ಕಾರ ವಜಾಗೊಳಿಸಿ

    ಚಾಮರಾಜನಗರ: ಲೋಕಸಭಾ ಚುನಾವಣೆಗಾಗಿ ಡಿಎಂಕೆ ರೂಪಿಸಿರುವ ಪ್ರಣಾಳಿಕೆಯಲ್ಲಿ ಕಾವೇರಿ ನದಿಗೆ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟೆಗೆ ತಡೆಯೊಡ್ಡುವುದಾಗಿ ಹೇಳಿರುವ ತಮಿಳುನಾಡು ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿತು.

    ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಶಿಲ್ಪಾನಾಗ್ ಅವರನ್ನು ಶುಕ್ರವಾರ ಭೇಟಿ ಮಾಡಿದ ಕರ್ನಾಟಕ ಸೇನಾಪಡೆ ಕಾರ್ಯಕರ್ತರು, ತಮಿಳುನಾಡು ಸರ್ಕಾರ ಲೋಕಸಭೆಯ ಚುನಾವಣೆಯ ಸಂಬಂಧ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಪ್ರಮುಖವಾಗಿ ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿರುವ ಮೇಕೆದಾಟು ಯೋಜನೆಯನ್ನು ನಾವು ಮಾಡಲು ಬಿಡುವುದಿಲ್ಲವೆಂದು ಹೇಳಿರುವುದು ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಅತ್ಯಂತ ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಚುನಾವಣೆಯ ಸಂದರ್ಭದಲ್ಲಿ ಬೇರೆ ರಾಜ್ಯದ ಕುಡಿಯುವ ನೀರಿನ ಯೋಜನೆಯ ಬಗ್ಗೆ ಮಾತನಾಡಿರುವುದು ಚುನಾವಣಾ ನೀತಿಯನ್ನು ತಮಿಳುನಾಡು ಸರ್ಕಾರ ಉಲ್ಲಂಘನೆ ಮಾಡಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ಅಗೌರವ ತೋರಿಸಿದ್ದಾರೆ. ಕರ್ನಾಟಕದ ಮೇಕೆದಾಟು ಯೋಜನೆ ಅನುಷ್ಠಾನಗೊಂಡರೆ ಕರ್ನಾಟಕ ರಾಜ್ಯದ ಅನೇಕ ಜಿಲ್ಲೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಸಿಗುತ್ತದೆ. ಕುಡಿಯುವ ನೀರಿನ ಯೋಜನೆಗೆ ಯಾವುದೇ ಕಾರಣಕ್ಕೂ ಯಾವುದೇ ಸರ್ಕಾರವಾಗಲಿ, ಯಾವುದೇ ವ್ಯಕ್ತಿಯಾಗಲಿ ಅಡ್ಡಿಪಡಿಸಲು ಸಾಧ್ಯವಿಲ್ಲ ಎಂದರು.
    ತಮಿಳುನಾಡು ಸರ್ಕಾರವನ್ನು ವಜಾ ಮಾಡಿ ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು. ತಮಿಳುನಾಡು ಸರ್ಕಾರ ಧೋರಣೆಯನ್ನು ಚುನಾವಣಾ ಆಯೋಗಕ್ಕೆ ತಿಳಿಸಿ ಕ್ರಮಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು.

    ಚಾ.ರಂ.ಶ್ರೀನಿವಾಸಗೌಡ, ಪುರುಷೋತ್ತಮ್, ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಚಾ.ರಾ.ಕುಮಾರ್, ಶ್ರೀಗಂಧ ಕನ್ನಡ ಯುವ ವೇದಿಕೆ ಅಧ್ಯಕ್ಷ ರವಿಚಂದ್ರ ಪ್ರಸಾದ್ ಕಹಳೆ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts