More

    ಉದ್ಯೋಗ ಕೌಶಲ್ಯ ಕುರಿತು ಮಾಹಿತಿ ನೀಡಿ

    ಚಾಮರಾಜನಗರ: ಬೋಧಕರು ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯ ಕುರಿತು ಪರಿಣಾಮಕಾರಿಯಾಗಿ ಮಾಹಿತಿ ನೀಡಲು ಕಾರ್ಯಾಗಾರ ಸಹಕಾರಿಯಾಗಿದೆ ಎಂದು ಮೈಸೂರಿನ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯ ವಿಶೇಷಾಧಿಕಾರಿ ಅರುಣ್‌ಕುಮಾರ್ ತಿಳಿಸಿದರು.

    ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಧ್ವಾನಿ ಫೌಂಡ್ಯಶನ್, ಕಾಲೇಜು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಉದ್ಯೋಗ ಕೌಶಲ್ಯ ಕಾರ್ಯಕ್ರಮ ಹಾಗೂ ಬೋಧಕರಿಗೆ ಎರಡು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

    ಬೋಧಕರು ಪದವಿ ಅಭ್ಯಾಸ ಮಾಡುವ ಹಾಗೂ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಸೂಕ್ತವಾದ ಉದ್ಯೋಗ ಕೌಶಲ್ಯ ಮಾಹಿತಿಯನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳು ಉದ್ಯೋಗ ಪಡೆದು ಉತ್ತಮ ಪ್ರಜೆಗಳಾಗಿ ರೂಪಿಸಲು ಸಾಧ್ಯವಾಗಲಿದೆ. ಕಾರ್ಯಗಾರವು ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯಗಳ ಮಾರ್ಗದರ್ಶನ ಮಾಡಲು ಸಹಕಾರಿಯಾಗಲಿದೆ ಎಲ್ಲಾ ಕಾಲೇಜಿನ ಪ್ರಾಧ್ಯಾಪಕರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

    ಕಾಲೇಜಿನ ಪ್ರಾಂಶುಪಾಲೆ ಪ್ರೊ.ಎಸ್.ಚಂದ್ರಮ್ಮ ಮಾತನಾಡಿ, ಈ ಕಾರ್ಯಗಾರದಲ್ಲಿ ಸಂಪೂರ್ಣ ಮಾಹಿತಿಗಳನ್ನು ಪಡೆದು ತಮ್ಮ ತಮ್ಮ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ರೀತಿಯಲ್ಲಿ ಉದ್ಯೋಗ ಕೌಶಲ್ಯಗಳನ್ನು ಕುರಿತು ಮಾರ್ಗದರ್ಶನ ನೀಡಬೇಕು ಎಂದರು.

    ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವಾಧ್ವಾನಿ ಫೌಂಡೇಶನ್ ಮಾಸ್ಟರ್ ಟ್ರೈನರ್ ಸ್ವಾತಿ ಪುತ್ರನ್, ಡಾ.ಪಿ.ಎಸ್.ಗುರುಪ್ರಸಾದ್, ಪ್ರೊ.ಎಂ.ಕೆ.ಮಂಜುನಾಥ್ ಹಾಗೂ ಪದವಿ ಕಾಲೇಜುಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts