More

    ಶೇ.90 ರಷ್ಟು ಪಾರದರ್ಶಕ ಮತದಾನದ ಗುರಿ

    ಚಾಮರಾಜನಗರ: ಜಿಲ್ಲೆಯಲ್ಲಿ ಪೌರಕಾರ್ಮಿಕರಿಂದ ಹಿಡಿದು ಉನ್ನತ ಅಧಿಕಾರಿಗಳವರೆಗೂ ಚುನಾವಣಾ ಕೆಲಸಗಳನ್ನು ಪಾರದರ್ಶಕವಾಗಿ ನಡೆಸಿ ಶೇ. 90ಕ್ಕಿಂತ ಹೆಚ್ಚು ಮತದಾನವಾಗುವಂತೆ ನೋಡಿಕೊಳ್ಳುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.

    ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಸ್ವೀಪ್ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ ಸ್ವೀಪ್ ಚಟುವಟಿಕೆಗಳನ್ನು ವ್ಯಾಪಕವಾಗಿ ಆಯೋಜಿಸಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಬಹಳ ಅರ್ಥಪೂರ್ಣವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಾನಪದ ಕಲೆಗಳ ತವರೂರು ಚಾಮರಾಜನಗರದಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಸ್ವೀಪ್ ಚಟುವಟಿಕೆಯಡಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲರೂ ತಪ್ಪದೇ ಮತದಾನದಲ್ಲಿ ಭಾಗವಹಿಸಿ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಜೆ.ಕಂಟ್ರಾಕ್ಟರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ನೋಡೆಲ್ ಅಧಿಕಾರಿ ಪಿ. ಲಕ್ಷ್ಮೀ ಹಾಗೂ ಇತರರು ಉಪಸ್ಥಿತರಿದ್ದರು.

    ಗಮನಸೆಳೆದ ಜಾಥಾ ಕಾರ್ಯಕ್ರಮ:
    ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ನಗರದ ಶ್ರೀಚಾಮರಾಜೇಶ್ವರ ದೇವಾಲಯದಿಂದ ಮತದಾನ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಚಾಲನೆ ನೀಡಿದರು. ಬಳಿಕ ಅಲ್ಲಿಂದ ಸಾಗಿದ ಜಾಥಾ ಬಿ. ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಸಾಗಿ ಜಿಲ್ಲಾಡಳಿತ ಭವನದ ಮುಂಭಾಗ ಮುಕ್ತಾಯವಾಯಿತು. ಜಾಗೃತಿ ಜಾಥಾದಲ್ಲಿ ಜಾನಪದ ಮಹಿಳಾ ಕಲಾತಂಡಗಳೊಂದಿಗೆ ವಿವಿಧ ಇಲಾಖೆ ಅಧಿಕಾರಿಗಳು, ನಾಗರಿಕರು, ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಪಾಲ್ಗೊಂಡಿದ್ದರು. ರಸ್ತೆಯುದ್ದಕ್ಕೂ ಚುನಾವಣಾ ಪರ್ವ-ದೇಶದ ಗರ್ವ ಘೋಷವಾಕ್ಯಗಳನ್ನು ಮೊಳಗಿಸಿ ಮತದಾನದ ಜಾಗೃತಿ ಮೂಡಿಸಿದರು. ಅಲ್ಲದೇ ಜಿಲ್ಲಾಡಳಿತ ಭವನದ ಅವರಣದಲ್ಲಿ ವಿವಿಧ ಮಹಿಳಾ ಸ್ವಸಹಾಯ ಸಂಘಗಳು, ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ತಯಾರಿಸಿದ ಉತ್ಪನ್ನಗಳ ಮಾರಾಟಮಳಿಗೆಯನ್ನು ತೆರೆಯಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts