More

    ಮತದಾನದ ಆಮಂತ್ರಣ ಪತ್ರ ಅನಾವರಣ

    ಚಾಮರಾಜನಗರ: ಜಿಲ್ಲೆಯಲ್ಲಿ ಈ ಬಾರಿ 18 ವರ್ಷ ತುಂಬಿದ ನೂತನ ಮತದಾರರನ್ನು ಮತಗಟ್ಟೆಗಳಿಗೆ ಸೆಳೆದು ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ನಗರದ ಜಿಲ್ಲಾಡಳಿತ ಭವನದ ಮುಂಭಾಗ ಆಕರ್ಷಕವಾಗಿ ವಿನ್ಯಾಸಗೊಳಿಸಿ ಅಳವಡಿಸಲಾಗಿರುವ ಬೃಹತ್ ಮತದಾರರ ಆಮಂತ್ರಣ ಪತ್ರವನ್ನು ಮಂಗಳವಾರ ಅನಾವರಣಗೊಳಿಸಲಾಯಿತು.

    ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಜಿಲ್ಲಾ ಸ್ವೀಪ್ ಕಾರ್ಯಕ್ರಮದಡಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಸಂದರ್ಭದಲ್ಲಿ ಜಿಲ್ಲೆಯ ಯುವ ಮತದಾರರನ್ನು ಮತಗಟ್ಟೆಗಳಿಗೆ ಕರೆತರಲು ಮದುವೆಯ ಆಹ್ವಾನ ಪತ್ರದ ಮಾದರಿಯಲ್ಲಿ ತಯಾರಿಸಿ ಅಳವಡಿಸಲಾಗಿರುವ ಏ.26ರಂದು ಮತದಾನದ ಮಮತೆಯ ಕರೆಯೋಲೆ ಆಮಂತ್ರಣ ಪತ್ರವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾನಾಗ್ ಉದ್ಘಾಟಿಸಿದರು.

    ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಜೆ.ಕಂಟ್ರಾಕ್ಟರ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಚುನಾವಣಾ ರಾಯಭಾರಿ ದೀಪಾ ಬುದ್ದೆ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪಿ.ಲಕ್ಷ್ಮೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ತಾಲೂಕು ಪಂಚಾಯಿತಿ ಕಾರ್ಯನಿವಾಹಕ ಅಧಿಕಾರಿ ಕೃಷ್ಣಪ್ಪ ಹಾಗೂ ಇತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts