More

    ಶಿವರಾಜ ತಂಗಡಗಿ ವಿರುದ್ದ ಯುವ ಮೋರ್ಚಾ ಪ್ರತಿಭಟನೆ

    ಚಾಮರಾಜನಗರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಹೇಳಿಕೆಯನ್ನು ಖಂಡಿಸಿ ಜಿಲ್ಲಾ ಯುವ ಮೋರ್ಚಾದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

    ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು. ಸಚಿವ ಶಿವರಾಜ್ ತಂಗಡಗಿ ವಿರುದ್ಧ ೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

    ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸೂರ್ಯ ಬಾಲರಾಜ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹಾಗು ವಿಶ್ವ ವಿಖ್ಯಾತಿಯನ್ನು ಕಾಂಗ್ರೆಸ್‌ನವರು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ಸಿಗರು ಸಂಸ್ಕೃತಿ ಹೀನ ಪದಗಳನ್ನು ಬಳಕೆ ಮಾಡಿ, ಪ್ರಧಾನಿಗೆ ಅಪಮಾನ ಮಾಡಿದ್ದಾರೆ. ಇದು ಕೇವಲ ಸಚಿವ ಶಿವರಾಜ್ ತಂಗಡಗಿಯಿಂದ ಬಂದ ಹೇಳಿಕೆಯಲ್ಲ. ಮೋದಿ ಎನ್ನುವವರ ಕಪಾಳಕ್ಕೆ ಹೊಡೆಯಿರಿ ಎಂದು ಹೇಳುವ ಮೂಲಕ ಕಾಂಗ್ರೆಸ್‌ನವರ ಮನಸ್ಥಿತಿ ಮತ್ತು ಹತಾಶೆಯನ್ನು ತೋರ್ಪಡಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಈ ಕೂಡಲೇ ಸಚಿವ ಶಿವರಾಜ ತಂಗಡಗಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪಡೆದುಕೊಳ್ಳಬೇಕು. ಸಚಿವರು ದೇಶದ ಜನರ ಕ್ಷಮೆ ಯಾಚಿಸಬೇಕು. ಅತ್ಯಂತ ಹಿಂದುಳಿದ ಸಮುದಾಯದಿಂದ ಬಂದ ಪ್ರಧಾನಿ ಮೋದಿ ಅವರು ಬಹಳ ಕಷ್ಟು ಪಟ್ಟು ಟೀ ಮಾಡುತ್ತಾ ದೇಶದ ಭವಿಷ್ಯಕ್ಕಾಗಿ ಪ್ರಧಾನಿಯಾಗಿದ್ದಾರೆ. ಕಾಂಗ್ರೆಸ್‌ನವರು ಇಲ್ಲಸಲ್ಲದ ಸುಳ್ಳುಗಳನ್ನು ಹೇಳುತ್ತಿದ್ದಾರೆ. ದೇಶದಲ್ಲಿ ಶುದ್ದ ವಾದ ಆಡಳಿತವನ್ನು ನೀಡಿರುವ ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕೇಂದು ಯುವ ಸಮುದಾಯ ಕಾತುರವಾಗಿದೆ. ಹೀಗಾಗಿ ಹೋದ ಕಡೆಯಲ್ಲ. ಮೋದಿ, ಮೋದಿ ಮೋದಿ ಎಂದು ಕೂಗುತ್ತಿದ್ದಾರೆ. ಇದನ್ನು ಸಹಿಸದ ರಾಜ್ಯದ ಕಾಂಗ್ರೆಸ್ ಮುಖಂಡರು ಇಂಥ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು.

    ಪ್ರತಿಭಟನೆಯಲ್ಲಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ್, ಸಾಗಡೆ ಗುರು, ಯಳಂದೂರು ರುದ್ರ, ಪ್ರಮೋದ್, ಕೋಟಂಬಳ್ಳಿ ಕುಮಾರ್,ಕೊತ್ತಲವಾಡಿ ಮಹದೇವಸ್ವಾಮಿ, ಗುರುಪ್ರಸಾದ್, ಪ್ರವೀಣ್, ಬುಲೆಟ್ ಚಂದ್ರು, ಮಹದೇವಪ್ರಸಾದ್, ಮಹೇಶ್‌ನಾಯಕ, ಬೂದಂಬಳ್ಳಿ ರಾಜೇಶ್, ಕೇಬಲ್ ರಂಗಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ವಿರಾಟ್ ಶಿವು, ಜಿಲ್ಲಾ ಸಹ ವಕ್ತಾರ ಮಂಜುನಾಥ್, ಕೂಸಣ್ಣ ಹಾಗೂ ಇತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts