More

    ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ

    ಚಾಮರಾಜನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸುನ ನಿಟ್ಟಿನಲ್ಲಿ ಜಾರಿಯಾಗಿರುವ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಪಿ.ಸಿ.ಮೀನಾ ಸೂಚನೆ ನೀಡಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಚುನಾವಣೆಯ ವಿವಿಧ ಪ್ರಕ್ರಿಯೆಗಳ ಕುರಿತು ಪೂರ್ವ ಸಿದ್ಧತೆಗಳ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

    ಚುನಾವಣೆಯನ್ನು ಪಾರದರ್ಶಕ ಹಾಗೂ ಮುಕ್ತವಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಯಾವುದೇ ಚುನಾವಣಾ ಅಕ್ರಮಗಳಿಗೆ ಅವಕಾಶವಾಗದಂತೆ ಕಟ್ಟೆಚ್ಚರ ವಹಿಸಬೇಕು. ಚುನಾವಣಾ ಅಕ್ರಮಕ್ಕೆ ಕಾರಣವಾಗುವಂತಹ ಯಾವುದೇ ಪ್ರಕರಣಗಳೇ ಕಂಡು ಬಂದರೂ ನಿರ್ದಾಕ್ಷಿಣ್ಯವಾಗಿ ಕ್ರಮ ವಹಿಸಬೇಕು. ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿರುವ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

    ವೆಚ್ಚ ವೀಕ್ಷಕ ಎಂ.ಮೋಹನ್ ಬಾಬು ಮಾತನಾಡಿ, ಅಭ್ಯರ್ಥಿಗಳ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಪ್ರತಿಯೊಂದು ವೆಚ್ಚದ ಬಗ್ಗೆ ಪ್ರತಿದಿನ ನಿಗಾ ವಹಿಸಿ ವರದಿ ಸಲ್ಲಿಸಬೇಕು. ಎಸ್‌ಎಸ್‌ಟಿ ಹಾಗೂ ಎಸ್‌ಎಫ್‌ಟಿ, ಇನ್ನಿತರ ತಂಡಗಳು ಜವಾಬ್ದಾರಿಯುತವಾಗಿ ತಮಗೆ ವಹಿಸಿರುವ ಕೆಲಸ ನಿರ್ವಹಿಸಿ ಅಧಿಕಾರಿಗಳು ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.

    ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಶಿಲ್ಪಾನಾಗ್, ಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ದಿನದಿಂದ ಇದುವರೆಗೆ ಚುನಾವಣಾ ಸಿದ್ಧತೆಗಾಗಿ ಕೈಗೊಂಡಿರುವ ವಿವಿಧ ಪ್ರಕ್ರಿಯೆಗಳನ್ನು ಸಾಮಾನ್ಯ ವೀಕ್ಷಕರು ಹಾಗೂ ವೆಚ್ಚ ವೀಕ್ಷಕರಿಗೆ ಪವರ್ ಪಾಯಿಂಟ್ ಮೂಲಕ ವಿವರಿಸಿದರು.
    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಸಹಾಯಕ ಚುನಾವಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts