More

    ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ

    ಚಾಮರಾಜನಗರ: ತಾಲೂಕು ಪಂಚಾಯಿತಿ, ತಾಲೂಕು ಸ್ವೀಪ್ ಸಮಿತಿ ಹಾಗೂ ಸಂತೇಮರಳ್ಳಿ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಿಂದ ಸಂತೇಮರಳ್ಳಿಯಲ್ಲಿ ಮಂಗಳವಾರ ಚುನಾವಣಾ ಪರ್ವ-ದೇಶದ ಗರ್ವ ಎಂಬ ಘೋಷವಾಕ್ಯದೊಂದಿಗೆ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.

    ಜಾಗೃತಿ ಜಾಥಾಗೆ ತಾಲೂಕು ಪಂಚಾಯಿತಿ ಇಒ ಕೃಷ್ಣಪ್ಪ ಚಾಲನೆ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿದರು. ಬಳಿಕ ಸಂತೇಮರಳ್ಳಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಚುನಾವಣಾ ಪರ್ವ-ದೇಶದ ಗರ್ವ ಎಂಬ ಘೋಷವಾಕ್ಯ ಮೊಳಗಿಸಲಾಯಿತು. ಅಲಂಕರಿಸಿದ ಎತ್ತಿನ ಗಾಡಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದವು. ಬಳಿಕ ಕರಪತ್ರ ವಿತರಿಸಿ, ಕಡ್ಡಾಯವಾಗಿ ಮತದಾನ ಮಾಡುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts