More

    ಜಾನುವಾರುಗಳಿಗೆ ಕಡ್ಡಾಯವಾಗಿ ಕುಡಿಯುವ ನೀರು ಕಲ್ಪಿಸಿ

    ಚಾಮರಾಜನಗರ: ಬರದ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ತಪ್ಪಿದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಶಿಲ್ಪಾನಾಗ್ ಎಚ್ಚರಿಸಿದ್ದಾರೆ.
    ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ನೀರಿನ ಕೊರತೆ ಇರುವ ಗ್ರಾಮಗಳಲ್ಲಿ ಆಯಾ ತಾಲೂಕು ತಹಸೀಲ್ದಾರ್‌ಗಳು ಹಾಗೂ ತಾಲೂಕು ಪಂಚಾಯಿತಿ ಇಒಗಳು ಪಶುಪಾಲನಾ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಜಾನುವಾರುಗಳಿಗೆ ನೀರಿನ ವ್ಯವಸ್ಥೆ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    ನೀರಿನ ಕೊರತೆ ಇರುವ ಗ್ರಾಮಗಳಲ್ಲಿ ತೊಟ್ಟಿಗಳನ್ನು ಪರಿಶೀಲಿಸಿ ಸ್ವಚ್ಚಗೊಳಿಸಬೇಕು. ತೊಟ್ಟಿಗಳು ದುರಸ್ತಿಯಲ್ಲಿದ್ದರೆ ಸರಿಪಡಿಸ ಬೇಕು. ಬೇರೆ ಮೂಲಗಳು ಇಲ್ಲದಿದ್ದಲ್ಲಿ ಟ್ಯಾಂಕರ್ ಮೂಲಕ ತೊಟ್ಟಿಗಳಿಗೆ ಸರಬರಾಜು ಮಾಡಬೇಕೆಂದು ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts