More

    ಕೋಳಿಪಾಳ್ಯ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

    ಚಾಮರಾಜನಗರ: ತಾಲೂಕಿನ ಕೋಳಿಪಾಳ್ಯ ಗ್ರಾಮಸ್ಥರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಲೋಕಸಭೆ ಚುನಾವಣೆ ಮತದಾನ ಬಹಿಷ್ಕಾರ ಎಚ್ಚರಿಕೆ ನೀಡಿ ಮಂಗಳವಾರ ಪ್ರತಿಭಟನೆ ನಡೆಸಿದರು.

    ಗ್ರಾಮದಲ್ಲಿ ಗುಂಪುಗೂಡಿದ ಜನರು ಜಿಲ್ಲಾಡಳಿತದ ವಿರುದ್ಧ ೋಷಣೆ ಕೂಗಿ, ತಮ್ಮ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಪರಿವರ್ತನೆ ಮಾಡಿಕೊಡಬೇಕೆಂದು ಆಗ್ರಹಿಸಿದರು. ಮುಖಂಡ ರಾಜೇಂದ್ರ ನಾಯಕ ಮಾತನಾಡಿ, ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಮಾಡಿಕೊಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದೆವು. ಆಗ ಭರವಸೆ ಸಿಕ್ಕ ಹಿನ್ನೆಲೆಯಲ್ಲಿ ಧರಣಿ ಕೈ ಬಿಟ್ಟಿದ್ದೆವು. ಆದರೆ ಈವರೆಗೂ ಆಶ್ವಾಸನೆ ಈಡೇರಿಲ್ಲ. ಈ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಯ ಮತದಾನ ಬಹಿಷ್ಕಾರ ಹಾಕಿ ಪ್ರತಿಭಟನೆ ನಡೆಸುತ್ತಿದ್ದೇವೆ. ಸ್ಥಳಕ್ಕೆ ಅಧಿಕಾರಿಗಳು ಬರುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ ಎಂದರು. ಪ್ರತಿಭಟನೆಯಲ್ಲಿ ಸುರೇಶ್‌ನಾಯಕ, ಗುರುನಾಯಕ, ಮಹೇಶ ನಾಯಕ, ರವೀಂದ್ರ, ಹರೀಶ್‌ನಾಯಕ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts