More

  ಶ್ರೀಚನ್ನಬಸವೇಶ್ವರ ಶಾಲೆಗೆ ಶೇ.96 ಫಲಿತಾಂಶ

  ಚಾಮರಾಜನಗರ: ಈ ಬಾರಿಯ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿನ ಹರವೆಯಲ್ಲಿರುವ ಶ್ರೀ ಚನ್ನಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ 96 ಫಲಿತಾಂಶ ಪಡೆದುಕೊಂಡಿದೆ.

  ಶಾಲೆಯಿಂದ 22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 21 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿ ಭುವನೇಶ್ವರಿ (534) ಎಚ್.ಎನ್.ಮಧುರಾ, (517) ಚಂದ್ರುಶ್ರೀ(510) ಸೇರಿದಂತೆ 10 ವಿದ್ಯಾರ್ಥಿಗಳು ಅತ್ಯುತ್ತಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದು, ಇನ್ನು 11 ಮಂದಿ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕರು ತಿಳಿಸಿದ್ದಾರೆ.

  ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು, ಪೋಷಕ ವರ್ಗದವರು ಹಾಗೂ ಶಾಲೆಯ ಮುಖ್ಯಶಿಕ್ಷಕರು, ಸಹ ಶಿಕ್ಷಕ ವೃಂದವನ್ನು ಶ್ರೀಚನ್ನಬಸವೇಶ್ವರ ವಿದ್ಯಾಸಂಸ್ಥೆ ಅಧ್ಯಕ್ಷರಾದ ಹರವೆ ವಿರಕ್ತ ಮಠಾಧ್ಯಕ್ಷ ಶ್ರೀಸರ್ಪಭೂಷಣಸ್ವಾಮೀಜಿ, ಸಂಸ್ಥೆಯ ಕಾರ್ಯದರ್ಶಿ ಎಚ್.ಎಸ್. ಗಿರೀಶ್, ಅಭಿನಂದಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts