More

    ಹೆಚ್ಚಿನ ಬೆಳೆ ಪರಿಹಾರಕ್ಕೆ ರೈತರ ಆಗ್ರಹ

    ಚಾಮರಾಜನಗರ : ಕಳೆದ ಮೂರು-ನಾಲ್ಕೂ ದಿನಗಳಿಂದ ಸುರಿಯುತ್ತಿರುವ ಬಿರುಗಾಳಿ ಸಹಿತ ಮಳೆಯಿಂದಾಗಿ ಅಪಾರ ಪ್ರಮಾಣದ ಬಾಳೆ ಹಾಗೂ ವಿವಿಧ ತೋಟಗಾರಿಕೆ ಬೆಳೆಗಳು ನಾಶವಾಗಿದ್ದು, ವೈಜ್ಞಾನಿಕ ಪರಿಹಾರ ನೀಡುವಂತೆ ರೈತರು ಒತ್ತಾಯಿಸುತ್ತಿದ್ದಾರೆ.
    ಜಿಲ್ಲೆಯ ಚಾಮರಾಜನಗರ, ಗುಂಡ್ಲುಪೇಟೆ, ಹನೂರು ಹಾಗೂ ಕೊಳ್ಳೇಗಾಲ ತಾಲೂಕಿನ ವ್ಯಾಪ್ತಿಯಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಯಿಂದಾಗಿ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಬಾಳೆ ನೆಲಕಚ್ಚಿದೆ. ತೋಟಗಾರಿಕೆ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಸುಮಾರು 1,500 ಎಕರೆಯಷ್ಟು ಬಾಳೆ ನಾಶವಾಗಿದೆ. ಮುಂದಿನ ದಿನಗಳಲ್ಲಿ ಇದೇ ರೀತಿಯಲ್ಲಿ ಮಳೆಯಾದರೆ ಮತ್ತಷ್ಟು ಬೆಳೆ ನಾಶವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ತೋಟಗಾರಿಕೆ ಇಲಾಖೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಮಾರ್ಗಸೂಚಿಯಂತೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ವಿತರಣೆ ಮಾಡಲಾಗುತ್ತದೆ. ಆದರೆ ರೈತರು ವೈಜ್ಞಾನಿಕ ರೀತಿಯಲ್ಲಿ ಹೆಚ್ಚಿನ ಪರಿಹಾರ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಪ್ರಸ್ತುತ ಸರ್ಕಾರ ನೀಡುತ್ತಿರುವ ಪರಿಹಾರದಿಂದ ರೈತರು ಅನುಭವಿಸುವ ನಷ್ಟ ತುಂಬಿಕೊಡಲು ಸಾಧ್ಯವಿಲ್ಲ. ಹಾಗಾಗಿ ಹೆಚ್ಚಿನ ಪರಿಹಾರ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts