More

    ಜಿಲ್ಲೆಯಲ್ಲಿ 37 ಸಾವಿರ ರೈತರಿಗೆ ಮೇವಿನಕಿಟ್ ವಿತರಣೆ

    ಚಾಮರಾಜನಗರ: ಬರ ನಿರ್ವಹಣೆ ಸಂಬಂಧ ರೈತರು ತಮ್ಮ ಜಮೀನುಗಳಲ್ಲಿ ಮೇವು ಬೆಳೆಯಲು ಅನುಕೂಲವಾಗುವಂತೆ ಪಶುಪಾಲನಾ ಇಲಾಖೆಯಿಂದ ಮಿನಿ ಮೇವಿನ ಕಿಟ್ (ಬೀಜ)ಗಳನ್ನು ನೀಡಲಾಗುತ್ತದೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದರು.

    ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ನಿರ್ವಹಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಗೋಶಾಲೆಗಳು ಹಾಗೂ ಮೇವು ಬ್ಯಾಂಕ್‌ಗಳ ನಿರ್ವಹಣೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಚಾಮರಾಜನಗರ ತಾಲೂಕಿನ 9388, ಗುಂಡ್ಲುಪೇಟೆಯ 9387, ಕೊಳ್ಳೇಗಾಲ 7435, ಹನೂರು 9966 ಮತ್ತು ಯಳಂದೂರಿನ 1343 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 37519 ರೈತರಿಗೆ ಈಗಾಗಲೇ ಮಿನಿ ಮೇವಿನ ಕಿಟ್‌ಗಳನ್ನು ವಿತರಿಸಲಾಗಿದೆ. ವಿತರಣೆ ಬಳಿಕ ರೈತರು ಮೇವಿನ ಬೀಜ ಬಿತ್ತಿದ್ದಾರೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

    ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಹನುಮೇಗೌಡ, ಹನೂರು ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಸಿದ್ದರಾಜು ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts